ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ‘ಸಂಘಟನಾ ಸೃಜನ್-2’ ಅಭಿಯಾನದಡಿ ಸಂಘಟನಾ ಸಭೆ ಆಯೋಜಿಸಲಾಗಿದೆ.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರು, ಮಂಡಲ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಕುರಿತು ಚರ್ಚಿಸಲಾಗುವುದು. ಆಸಕ್ತರು ಹಾಗೂ ಸಂಬಂಧಪಟ್ಟ ಪದಾಧಿಕಾರಿಗಳು ಅಧ್ಯಕ್ಷ ಸ್ಥಾನಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿಯೂ ಭಾಗವಹಿಸಲಿದ್ದಾರೆ.
ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕೆ. ಪುಂಡಲಿಕ್ ರಾವ್, ಶ್ರೀದೇವಿ ಹಾಗೂ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ನಾಳೆ ಮತ ಎಣಿಕೆ, ಸಕಲ ಸಿದ್ಧತೆ ಪೂರ್ಣ
ಜಿಲ್ಲೆಯ ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರು ಸಭೆಗೆ ಕಡ್ಡಾಯವಾಗಿ ಹಾಜರಾಗಿ, ಅಗತ್ಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪುರ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.






