ಯಾದಗಿರಿ | ಅಂಬೇಡ್ಕರ್ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ; ಮುಖ್ಯ ಶಿಕ್ಷಕರ ಅಮಾನತಿಗೆ ದಲಿತ ಸೇನೆ ಆಗ್ರಹ

Date:

ವಡಗೇರಾ ತಾಲೂಕಿನ ಐಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ಸಮರ್ಪಣಾ ದಿನದಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇರಿಸದೆ, ಸಂವಿಧಾನ ಪೀಠಿಕೆಗೆ ಮಾಲಾರ್ಪಣೆ ಮಾಡದೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ, ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ದಲಿತ ಸೇನೆ ವಡಗೇರಾ ತಾಲೂಕು ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ತಾಲೂಕು ಅಧ್ಯಕ್ಷ ಅಯ್ಯಪ್ಪ ಗೊಂದೇನೂರ, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಸ್ಪಷ್ಟ ಆದೇಶವಿದ್ದರೂ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಬಾಬಾ ಸಾಹೇಬರ ಭಾವಚಿತ್ರ ಇರಿಸದೆ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಸಂವಿಧಾನ ಶಿಲ್ಪಿಗೆ ಮಾಡಿದ ನೇರ ಅವಮಾನ ಹಾಗೂ ಗಂಭೀರ ಕರ್ತವ್ಯ ಲೋಪವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಸಮಾನತೆ, ಭ್ರಾತೃತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಮಕ್ಕಳಿಗೆ ಕಲಿಸಬೇಕಾದ ಶಿಕ್ಷಕರೇ ಸಂವಿಧಾನ ಶಿಲ್ಪಿಯನ್ನು ಕಡೆಗಣಿಸಿದರೆ, ವಿದ್ಯಾರ್ಥಿಗಳಿಗೆ ಯಾವ ಸಂದೇಶ ನೀಡಿದಂತಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಮುಂದಿನ 3–4 ದಿನಗಳಲ್ಲಿ ಮುಖ್ಯ ಶಿಕ್ಷಕರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣ ಅಮಾನತುಗೊಳಿಸಬೇಕು. ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಅಥವಾ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಸರ್ಕಾರಿ ಶಿಕ್ಷಣ ಸಂಸ್ಥೆಯಲ್ಲೇ ರಾಷ್ಟ್ರನಾಯಕರು ಹಾಗೂ ಸಂವಿಧಾನ ಶಿಲ್ಪಿಗೆ ಅಗೌರವ ತೋರುವುದು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುವ ಕೃತ್ಯವಾಗಿದೆ. ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯ ಕಾಪಾಡುವ ದೃಷ್ಟಿಯಿಂದ ಶಿಕ್ಷಣ ಇಲಾಖೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಯ್ಯಪ್ಪ ಗೊಂದೇನೂರ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ| ಕಸದ ಸಮಸ್ಯೆ ಮುಕ್ತಿಗೆ ಹೊಸ ಪ್ರಯೋಗ

ವಿಭಿನ್ನ ಆಲೋಚನೆ ಮೂಲಕ ಪಟ್ಟಣದ ಸ್ವಚ್ಛತೆಗೆ ಮುಂದಾಗಿರುವ ಪುರಸಭೆ ಕಸ ಹಾಕುವ...

ಕೋಲಾರ | ದಿನ್ನೆ ಹೊಸಹಳ್ಳಿ ಸರ್ಕಾರಿ ಶಾಲೆಗೆ ರಂಗಮಂದಿರ ಕಟ್ಟಿಸಿಕೊಡ್ತೇನೆ : ಕೆ.ವಿ.ಪ್ರಭಾಕರ್

ದಿನ್ನೆ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಂಗಮಂದಿರವನ್ನು ಕಟ್ಟಿಸಿಕೊಡುವ ಮೂಲಕ...

ಹಾವೇರಿ | ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ನಾಮಕರಣ: ಸಿಎಂ ಘೋಷಣೆ

ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ಮೆಡಿಕಲ್ ಕಾಲೇಜುನ್ನು ಹೊಸದಾಗಿ ನಾಮಕರಣ...

ಚಿಂತಾಮಣಿ | ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ

ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ...