ಯಾದಗಿರಿ | ಕಂದಕಕ್ಕೆ ಬಿದ್ದು ಹಸು ಸಾವು; ಪರಿಹಾರಕ್ಕೆ ಆಗ್ರಹ

Date:

ರಸ್ತೆಯ ಸೇತುವೆ ಕಂದಕಕ್ಕೆ ಹಸುವೊಂದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

- Advertisement -

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಮಳ್ಳಳ್ಳಿ ಗ್ರಾಮದ ಮಲ್ಲಪ್ಪ ಹಣಮಂತ ಬಳಿಚಕ್ರ ಎಂಬುವವರ ಹಸು ಮೃತಪಟ್ಟಿದ್ದು, ಗ್ರಾಮಸ್ಥರ ಸಹಾಯದಿಂದ ಹಸುವಿನ ಮೃತ ದೇಹವನ್ನು ಹೊರತೆಗೆದು ಅಂತ್ಯ ಸಂಸ್ಕಾರ ಮಾಡಿದ ಬಳಿಕ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಈ ಹಿಂದೆ ಧಾರಾಕಾರವಾಗಿ ಮಳೆ ಸುರಿದ ಕಾರಣದಿದಂದ ರಸ್ತೆ ಹಾಳಾಗಿದೆ. ರಸ್ತೆಯ ಕಳಪೆ ಕಾಮಗಾರಿ ಮಾಡಿದ್ದು, ಸಮರ್ಪಕ ಸೇತುವೆ ನಿರ್ಮಿಸದ ಕಾರಣ ರಸ್ತೆಯ ಮಗ್ಗುಲಲ್ಲಿರುವ ಕಂದಕ ಬಿದ್ದು ಹಸು ಮೃತಪಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗುರುಸುಣಿಗಿಯಿಂದ ಮಳ್ಳಳ್ಳಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದು ಇದೇ ರಸ್ತೆಯಾಗಿದೆ. ಹೀಗಾಗಿ ಇಂತಹ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಈ ರಸ್ತೆಯಲ್ಲಿ ಸುಮಾರು 5 ರಿಂದ 6ಕಡೆ ಕಂದಕಗಳು ನಿರ್ಮಾಣವಾಗಿರುವುದು ತೀರ ಆತಂಕಕಾರಿ ಸಂಗತಿಯಾಗಿದೆ” ಎಂದರು.

“ಇದೇ ರಸ್ತೆಯ ಮುಖಾಂತರ ಬಸ್ ಸೇರಿದಂತೆ ಇತರೆ ಎಲ್ಲ ವಾಹನಗಳೂ ಸಂಚರಿಸುತ್ತಿದ್ದವು. ಆದರೆ, ರಸ್ತೆ ಗುಂಡಿ ಬಿದ್ದಿರುವ ಕಾರಣ ಇತ್ತೀಚೆಗೆ ಬಸ್‌ ಹಾಗೂ ಬೃಹತ್ ವಾಹನಗಳ ಸಂಚಾರವೂ ಸ್ಥಗಿತಗೊಂಡಿದೆ. ಇದರಿಂದಾಗಿ ಸಣ್ಣ ಪುಟ್ಟ ವಾಹನಗಳು ಟಂಟಂಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಹೊಸಬರು ಸಂಚರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಇನ್ನೂ ಹೆಚ್ಚಿನ ಅನಾಹುತ ಆಗುವ ಮೊದಲೇ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ಮೃತಪಟ್ಟ ಹಸುವಿಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನರಸಾಪುರ ಕೆರೆ ಒತ್ತುವರಿ ತೆರವುಗೊಳಿಸಿ : ಸಚಿವ ಬೋಸರಾಜು ಸೂಚನೆ

“ಇನ್ನು ಮುಂದೆ ಯಾವುದೇ ಜೀವ ಹಾನಿಯಾದರೂ ಜಿಲ್ಲಾಡಳಿತವೇ ಹೊಣೆ ಹೊರಬೇಕಾಗುತ್ತದೆ. ಇಲ್ಲವಾದಲ್ಲಿ ಪ್ರಕರಣ ದಾಖಲಿಸಲು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಈ ವೇಳೆ ನಿಂಗಪ್ಪ, ಬಾಬು, ಮರೆಪ್ಪ, ಅಮ್ಮಣ್ಣ, ಸಾಬರೆಡ್ಡಿ, ತಿಪ್ಪಣ್ಣ, ಪದ್ಮಣ್ಣ, ದೇವು ಸೇರಿದಂತೆ ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...