ಯಾದಗಿರಿ | ಅನಧಿಕೃತ ಇ-ಖಾತೆಗಳು ಸೃಷ್ಠಿ; ಕ್ರಮಕ್ಕೆ ನಗರಸಭೆ ಪೌರಾಯುಕ್ತ ಆಗ್ರಹ

Date:

Advertisements

ಸರ್ಕಾರಿ ಜಾಗದಲ್ಲಿ ಸುಮಾರು 1,310ರಷ್ಟು ಅನಧಿಕೃತ ಇ-ಖಾತೆಗಳು, ಯೋಜನಾ ಪ್ರಾಧಿಕಾರದ ಅನುಮೋದನೆ ಇಲ್ಲದೆ 45 ಎಕರೆಯಲ್ಲಿ ಇ-ಖಾತೆಗಳನ್ನು ಸೃಷ್ಠಿಸಲಾಗಿದ್ದು, ಯಾದಗಿರಿ ನಗರಸಭೆಯಿಂದ ಸರ್ಕಾರಕ್ಕೆ ಅಂದಾಜು 18 ಕೋಟಿ ರೂ. ನಷ್ಟವುಂಟಾಗಿದೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ ತಿಳಿಸಿದರು.

“ಯಾದಗಿರಿ ನಗರಸಭೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ ಪೌರಾಯುಕ್ತರು, ಕಂದಾಯ ನಿರೀಕ್ಷಿಕರು, ಕಂದಾಯ ಅಧಿಕಾರಿಗಳು, ಕಿರಿಯ ಎಂಜಿನಿಯರ್, ಕರ ವಸೂಲಿಗರರ ಸಹಯೋಗದಿಂದ 2019ರಿಂದ 2023ರ ವರೆಗೆ 1310 ಇ-ಖಾತೆಗಳು ಅನಧಿಕೃತವಾಗಿವೆ” ಎಂದು ಹೇಳಿದರು.

“ಎನ್‌ಎ ಆಗದಿರುವ ಭೂಮಿ, ಪ್ಲಾನಿಂಗ್‌ ಆಗದೇ ಇರುವ ಭೂಮಿ, ಬಿಡುಗಡೆ ಆಗದಿರುವ ಭೂಮಿ, ರೈತರು ಉಳುಮೆ ಮಾಡುವಂತಹ ಭೂಮಿಗಳನ್ನು ಅನಧಿಕೃತವಾಗಿ ಲೇಔಟ್‌ ಮಾಡಿದ್ದು, ನಗರಸಭೆಗೆ ಅಂದಾಜಜು 18 ಕೋಟಿ ರೂ. ನಷ್ಟವುಂಟಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರಕಬೇಕಿದೆ: ಸಾಹಿತಿ ಮಲ್ಲಿಕಾರ್ಜುನ ಕಡಕೋಳ

“ಅನಧಿಕೃತ ಇ-ಖಾತೆ ಮಾಡಿರುವ ಅಂದಿನ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ದಾಖಲೆ ಸಹಿತ ದೂರು ಸಲ್ಲಿಸಲಾಗಿದೆ. ಶೀಘ್ರದಲ್ಲೇ ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು” ಎಂದು ಪ್ರಕಟಣೆಗೆ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲಾ ವಾಲೆಂಟಿಯರ್ ರಾಹುಲ್ ಕೊಲ್ಲೂರ್ ಕರ್ ಅವರ ಮಾಹಿತಿ ಆಧರಿಸಿದ ವರದಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X