ಯಾದಗಿರಿ | ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹುಣಸಗಿಯಲ್ಲಿ ಪ್ರತಿಭಟನೆ

Date:

ಪ.ಜಾತಿ ಮತ್ತು ಪ ಪಂಗಡ ಸಮುದಾಯದ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ಹಾಗೂ ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯ ಸರ್ಕಾರ ಮತ್ತು ಕೆಂದ್ರ ಸರ್ಕಾರದ ವಿರುದ್ಧ ಹುಣಸಗಿಯ ಪ.ಜಾತಿ, ಪ.ಪಂಗಡ ಸಾಮೂಹಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಬಿ.ಆರ್ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ಹುಣಸಗಿ ತಹಶೀಲ್ದಾರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮನವಿ ಪತ್ರ ಸಲ್ಲಿಸಿ ದೇವಿಂದ್ರಪ್ಪ ಬಳಿಚಕ್ರ ಮಾತನಾಡಿ, “ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಬೇರೆ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಗಾಯಿಸಿದ್ದು, ಅದನ್ನು ಹಿಂದಿರುಗಿಸಬೇಕು. ಸಂಬಂಧಪಟ್ಟ ವ್ಯಕ್ತಿಗಳಿಗೆ ಶಿಕ್ಷೆಯಾಗಬೇಕು. ವಾಲ್ಮೀಕಿ ನಿಗಮದ ಹಣ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆಯಾದ ಕುರಿತು ತನಿಖೆ ಮತ್ತು ತಪ್ಪಿತಸ್ಥ ವ್ಯಕ್ತಿಗಳಿಗೆ ಶಿಕ್ಷೆಯಾಗಬೇಕು. ರಾಮನಗರದಲ್ಲಿ ದಲಿತ ವ್ಯಕ್ತಿಯ ಕೈ ಕತ್ತರಿಸಿದವರಿಗೆ ಬಂಧನ ಮತ್ತು ಶಿಕ್ಷೆಯಾಗಬೇಕು. ಯಾದಗಿರಿ ನಗರದ ಪಿಎಸ್‌ಐ ಪರಶು ರಾಮ್ ಅವರ ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.

WhatsApp Image 2024 08 23 at 6.38.43 PM

ಕೆಂದ್ರ ಮತ್ತು ರಾಜ್ಯ ಸರ್ಕಾರ ದಲಿತ ಸಮುದಾಯಗಳಾದ ರೈತರು, ಕೃಷಿ ಕಾರ್ಮಿಕರು, ಮಹಿಳಾ ಕಾರ್ಮಿಕರು, ದೀನ ದಲಿತರು, ವಿದ್ಯಾರ್ಥಿಗಳು ಕಟ್ಟಡ ಕಾರ್ಮಿಕರಿ ಆಗಿರುವ ಅನ್ಯಾಯವನ್ನು ಸರಿದೂಗಿಸಲು ವಿಶೇಷ ಪ್ಯಾಕೇಜ್ ಮುಖಾಂತರ ಹಣ ಮಂಜೂರು ಮಾಡಿ ಅಭಿವೃದ್ಧಿ ಮಾಡಬೇಕು ಎಂದು ಇದೇ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದರು.

ದಲಿತ ಸಮುದಾಯಕ್ಕೆ ನ್ಯಾಯ ಸಿಗದಿದ್ದರೆ ರಾಜ್ಯಾದಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುದಣ್ಣ ದೊರೆ ಹುಣಸಗಿ, ಶರಣಪ್ಪ ತೆಗ್ಗೆಳ್ಳಿ, ಜುಮಣ್ಣ ಬಲಶೇಟ್ಟಿಹಾಳ, ವಿರೇಶ್ ಗುಳಬಾಳ, ಶಿವು ರಾಠೋಡ, ಬಸವರಾಜ ಹಗರಟಗಿ, ಚಂದ್ರಶೇಖರ ಹಳ್ಳೂರ, ಗುರುಪುತ್ರ ಹೊಸಮನಿ, ರಾಜ ವಜ್ಜಲ, ಸಿದ್ದು ಮೇಲಿನಮನಿ, ಕಾಶಿನಾಥ ಹಾದಿಮನಿ, ಪರಮಣ್ಣಿ ಕನ್ನಳ್ಳಿ, ನಾಗಯ್ಯ ಹುಣಸಗಿ, ಯಲ್ಲಪ್ಪ ಕಡದರಗಡ್ಡಿ, ಪ್ರಬು ಕಚನೂರ, ಮಲ್ಲಣ್ಣ ಹೆಬ್ಬಾಳ್ ಹುಣಸಗಿ, ಭೀಮನಗೌಡ ಪ್ರೋ. ಪಾಟೀಲ್, ಸಿದ್ದಣ್ಣ ಮೇಲಿನಮನಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...