ಯಾದಗಿರಿ | ಅಕ್ರಮ ಮದ್ಯ ಮಾರಾಟ ತಡೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

Date:

ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್‌ ಭೋಯರ್‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಹರ್ಷಲ್ ಬೋಯರ್ ಅವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿದ ಮುಖಂಡರು ಅಕ್ರಮ ಮಧ್ಯ ಮಾರಾಟ ತಡೆಗೆ ಹಾಗೂ ಅಬಕಾರಿ ಇಲಾಖೆ ಸ್ಥಳಾಂತರಿಸಲು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜಿಲ್ಲಾದ್ಯಕ್ಷ ಶರಣು ಎಸ್.ನಾಟೇಕರ್ ಮಾತನಾಡಿ, ʼಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿ ಮಿತಿಮೀರಿದ್ದು, ಗ್ರಾಮೀಣ ಭಾಗದ ಕಿರಾಣಿ ಅಂಗಡಿ, ಹೋಟೆಲ್‌ ಸೇರಿದಂತೆ ಅನೇಕ ಕಡೆ ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದ್ದು, ಬಡವರು, ಕೃಷಿ ಕೂಲಿಕಾರರು ವಿಶೇಷವಾಗಿ ಯುವ ಸಮೂಹ ಕುಡಿತದ ಚಟಕ್ಕೆ ಬಲಿಯಾಗಿ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆʼ ಎಂದು ಕಳವಳ ವ್ಯಕ್ತಪಡಿಸಿದರು.

ಅಕ್ರಮ ಮದ್ಯ ಮಾರಾಟ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ಕಂಡೂ ಕಾಣದಂತೆ ಮೌನಕ್ಕೆ ಜಾರಿದ್ದಾರೆ. ಅಬಕಾರಿ ಇಲಾಖೆಯ ನಿರ್ಲಕ್ಷ್ಯದಿಂದ ಅಕ್ರಮ ದಂಧೆ ಎಗ್ಗಿಲದೆ ನಡೆಯುತ್ತಿರುವ ಬಗ್ಗೆ ಅನುಮಾನ ಬರುತ್ತಿದ್ದು, ಈ ಬಗ್ಗೆ ಗಮನಹರಿಸಬೇಕುʼ ಎಂದರು.

ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಭೀಮರಾಯ ಕಾಗಿ, ಖಂಡಪ್ಪ ಸಾಹುಕಾರ್, ಶರಣು ಸಿ.ಮಮ್ಮದರ್, ಗಿರೀಶ್ ಚಟ್ಟೇಕರ್, ಹಣಮಂತ ಕಚಕನೂರ್, ಪ್ರಭು ಕಚಕನೂರ್, ಮಲ್ಲಿಕಾರ್ಜುನ ನಾಟೇಕರ್, ಬಸವರಾಜ ಯಲಸತ್ತಿ, ಸಂಪತ್ ಗುಳೇದ್, ರಮೇಶ್ ವಿಭೂತಿ, ಕೃಷ್ಣ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...