ಯಾದಗಿರಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Date:

ಉತ್ತರಾಖಂಡದ ಹಲ್ದಾನಿಯಲ್ಲಿ ಆಗಸ್ಟ್ 8ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಶ್ಯಾಮಸನ್ ಮಾಳಿಕೇರಿ, ‘ದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದಕ್ಕೆ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯೇ ಸಾಕ್ಷಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡಾ. ಬಿ.ಆರ್. ಅಂಬೇಡ್ಕರ್ ಅವರ ಕಾಲದಿಂದಲೂ ಜಾತಿ ತಾರತಮ್ಯದ ವಿರುದ್ಧ ಹೋರಾಟಗಳು ನಡೆಯುತ್ತಿವೆ. ಆದರೂ ಇಂದಿಗೂ ದಲಿತರಿಗೆ ಚಹಾ ಹೋಟೆಲ್, ದೇವಸ್ಥಾನ ಹಾಗೂ ಸಭೆ-ಸಮಾರಂಭಗಳಲ್ಲಿ ಅವಕಾಶ ನಿರಾಕರಿಸುವಂತಹ ಘಟನೆಗಳು ನಡೆಯುತ್ತಿವೆ. ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿ, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ಅತ್ಯಂತ ವಿಕೃತ ಹಾಗೂ ಖಂಡನಾರ್ಹ ಘಟನೆ. 21ನೇ ಶತಮಾನದ ಪ್ರಜಾಪ್ರಭುತ್ವದ ಭಾರತದಲ್ಲೂ ಜಾತಿ ತಾರತಮ್ಯದ ಮನಸ್ಥಿತಿ ಜೀವಂತವಾಗಿರುವುದು ಶೋಚನೀಯ ಎಂದರು.

ಇಂತಹ ಜಾತಿವಾದಿ ಮನಸ್ಥಿತಿಗೆ ಕಡಿವಾಣ ಹಾಕಬೇಕು. ಘಟನೆಯಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ಅಸ್ಪೃಶ್ಯತೆ ಖಂಡಿಸಿ ದಸಂಸ ಪ್ರತಿಭಟನೆ

ಪ್ರತಿಭಟನೆಯಲ್ಲಿ ನಗರಾಭಿವೃದ್ಧಿ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಗೋಪಾಲ ತೇಳಗೇರಿ, ಸೈದಪ್ಪ ಕೂಲೂರ್, ಭೀಮರಾಯ ಹೊಸ್ಮನಿ, ಪರಶುರಾಮ ಒಡೆಯರ್, ನಿಂಗಪ್ಪ ಬೀರನಾಳ್, ಹೊನ್ನಪ್ಪ ನಾಟೇಕಾರ್, ಲಾಲಪ್ಪ ತಲಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...