ಯಾದಗಿರಿ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದಸಂಸ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

Date:

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಭೀಮಮಾರ್ಗ (ರಿ.) ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಜಿಲ್ಲಾ ಸಂಚಾಲಕ ಶಿವಶಂಕರ ಹೆಚ್. ಹೊಸಮನಿ ಮಾತನಾಡಿ, ‘ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ ಎಂದು ಆರೋಪಿಸಲಾಗಿದೆ. ಪರೀಕ್ಷೆ ರದ್ದುಗೊಂಡ ಪರಿಣಾಮ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹೊಣೆ’ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ನೀಟ್ ಅಕ್ರಮವನ್ನು ತಡೆಯುವಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿಫಲರಾಗಿದ್ದಾರೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ, ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಹಾಗೂ ಪ್ರತಿಭಟನಾ ನಿರತರ ಮೇಲಿನ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಸಂಘಟನಾ ಸಂಚಾಲಕ ಡಾ. ಈರಣ್ಣ ಕಸನ್ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಮಲ್ಲಪ್ಪ ತಡಿಬಿಡಿ, ಪರಶುರಾಮ ಹೈಯ್ಯಾಳಕರ್, ವೆಂಕಟೇಶ ಕಟ್ಟಿಮನಿ, ಮಲ್ಲಿಕಾರ್ಜುನ ತಳವಾರಗೇರ, ಮಲ್ಲಿಕಾರ್ಜುನ ಜಾಲಿಬೆಂಚಿ, ಹಣಮಂತ ತೇಲ್ಕರ್, ಜಿಲ್ಲಾ ಖಜಾಂಚಿ ಸಿದ್ಧರಾಮ ನಾಯ್ಕ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...