ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

Date:

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಾ. ಕರ್ನಾಟಕ ದಲಿತ ಸಂಘರ್ಷ ಕ್ರಾಂತಿಕಾರಿ ಬಣದ ವತಿಯಿಂದ ಪಟ್ಟಣದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಜಾತಿ, ಮತಗಳ ಭೇದಭಾವವನ್ನು ತೊಡೆದುಹಾಕಿ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಮಹಾನ್ ಕ್ರಾಂತಿಕಾರಿಯಾಗಿದ್ದಾರೆ. ವಚನಗಳ ಮೂಲಕ ಮಾನವೀಯತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಅಂತಹ ಮಹಾನ್ ಶರಣರ ತೇಜೋವಧೆ ಮಾಡುವ ರೀತಿಯಲ್ಲಿ ಕೃತಿ ರಚಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಚೇತನಗಳು. ಬಸವಣ್ಣನವರ ಕುರಿತು ಖಾಸಗಿ ವಾಹಿನಿಯೊಂದರಲ್ಲಿ ರವಿ ಹಂಜ್ ಅವಹೇಳನಕಾರಿಯಾಗಿ ಮಾತನಾಡಿರುವುದನ್ನೂ ಖಂಡಿಸುತ್ತೇವೆ. ಕೂಡಲೇ ರವಿ ಹಂಜ್ ಹಾಗೂ ಸಂಬಂಧಪಟ್ಟ ನಕಲಿ ಪತ್ರಕರ್ತನನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಿವೃತ್ತ ಉಪನ್ಯಾಸಕ ಮಾನು ಗುರಿಕಾರ, ಚಿಂತಕ ಮೂರ್ತಿ ಬೊಮ್ಮನಹಳ್ಳಿ ಮಾತನಾಡಿದರು. ಬಳಿಕ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ, ಶರಣಪ್ಪ ನಗನೂರ, ಸಂಗಣ್ಣ ಚಿಂಚೋಳಿ, ಮಹೇಶ ಸುಂಗಲಕರ್, ಮರಿಯಪ್ಪ ಕಾಂಗ್ರೆಸ್, ಬಸವರಾಜ ಬೊಮ್ಮನಹಳ್ಳಿ, ಸಿದ್ದಣ್ಣ ಸುರಪುರಕರ್, ದುರಗಪ್ಪ ಅರಳಹಳ್ಳಿ, ಗಣಪತಿ ದೇವಿಕೇರಾ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಜಿಲ್ಲಾ ಪ್ರವಾಸ

ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ...

ಉಡುಪಿ | ಬಿಜೆಪಿಯವರಿಂದಲೇ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅಪೂರ್ಣ: ರಿಝ್ವಾನ್ ಅರ್ಷದ್

ಕಾರ್ಕಳ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಬಿಜೆಪಿಯವರೇ. ಅವರ...

ಮಂಡ್ಯ । ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿ : ಶಾಸಕ ರವಿಕುಮಾರ್ ಗೌಡರಿಂದ NHAI ಅಧಿಕಾರಿಗೆ ತರಾಟೆ

ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ...