ಯಾದಗಿರಿ | ಬರಪೀಡಿತ ಜಿಲ್ಲೆ ಘೋಷಿಸಿ; ರೈತರ ಸಾಲ ಮನ್ನಾಕ್ಕೆ ಸಮತಾ ಸೈನಿಕ ದಳ ಆಗ್ರಹ

Date:

ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಸಂಪೂರ್ಣ ಬೆಳೆಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ಜಿಲ್ಲಾ ಸಮಿತಿ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸಂಘಟನೆಯ ಮುಖಂಡರು, ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ಯಾದಗಿರಿಯಲ್ಲಿ ರೈತರು ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿ ಬಿತ್ತನೆ ಮಾಡಿದ್ದು, ಈ ಬಾರಿ ಸಮರ್ಪಕ ಮಳೆಯಾಗದ ಕಾರಣ ಬೆಳೆಗಳು ಒಣಗುವ ಹಂತಕ್ಕೆ ತಲುಪಿವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

‘ಮುಂಗಾರು ವೈಫಲ್ಯದಿಂದ ಜಿಲ್ಲೆಯಾದ್ಯಂತ ಬರದ ಛಾಯೆ ಆವರಿಸಿದ್ದು, ರೈತರನ್ನು ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಕ್ಷಣ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಜೊತೆಗೆ ರೈತರ ಸಂಪೂರ್ಣ ಬೆಳೆಸಾಲ ಮನ್ನಾ ಮಾಡಿ, ಪ್ರತಿ ರೈತ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೇಂದ್ರ ಕಾರಾಗೃಹದಿಂದ ಪರಾರಿ; ಗುಂಡು ಹಾರಿಸಿ ಕೈದಿಯ ಸೆರೆ

ಈ ಸಂದರ್ಭದಲ್ಲಿ ದಲಿತ ಹೋರಾಟಗಾರ ಚಂದ್ರಶೇಖರ್ ಗುತ್ತೇದಾರ್, ಜಿಲ್ಲಾ ಅಧ್ಯಕ್ಷ ಹತ್ತೀಗೂಡೂರು ಶರಣರೆಡ್ಡಿ, ಶರಣಪ್ಪ ಚಲವಾದಿ, ರಾಮಪ್ಪ ಮಾಲಹಳ್ಳಿ, ಮಲ್ಲಿಕಾರ್ಜುನ ಮಾಲಹಳ್ಳಿ ಸೇರಿದಂತೆ ಸಮತಾ ಸೈನಿಕ ದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...