ಯಾದಗಿರಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ; ಸುರಪುರ ತಹಶೀಲ್ದಾರ್‌ಗೆ ಮನವಿ

Date:

ಸಮಸ್ಯೆಗಳ್ನು ಬಗೆಹರಿಸಲು ರೈತರ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ ಮತ್ತು ಎಲ್ಲ ತಾಲೂಕು ಸಮಿತಿ, ಗ್ರಾಮ ಸಮಿತಿಯಿಂದ ಸುರಪುರ ತಹಶೀಲ್ದಾರ್ ಕಾರ್ಯಾಲಯದ ಎದುರು‌ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆ ಬಳಿಕ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿಯವರು ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, “2022-23, 24ರ ಮಳೆಯ ಪ್ರಭಾವದಿಂದ ಅತಿವೃಷ್ಠಿ ಇಲ್ಲವೇ ಅನಾವೃಷ್ಠಿಯಿಂದ ಒಂದಲ್ಲಾ ಒಂದು ಸಮಸ್ಯೆಗಳು ಉಂಟಾಗಿ ರೈತರು ಬೆಳೆ ಬೆಳೆದಿದ್ದರೂ ಯಾವುದೇ ಬೆಲೆ ಇಲ್ಲದಂತಾಗಿದೆ. ಅತಿವೃಷ್ಠಿ, ಅನಾವೃಷ್ಠಿಯಿಂದ ಬೆಳೆಗಳು ಹಾಳಾಗಿವೆ. ಕರ್ನಾಟಕ ರಾಜ್ಯ ರೈತ ಸಂಘ 3 ವರ್ಷಗಳಿಂದ ಹೋರಾಟ ಮಾಡುತ್ತ ಸರ್ಕಾರದ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಯಾವೊಬ್ಬ ಅಧಿಕಾರಿಗಳೂ ಸರಿಯಾಗಿ ಪರಿಶೀಲಿಸದೆ ಸರ್ಕಾರದಿಂದ ಯಾವುದೇ ರೈತನಿಗೆ ಪರಿಹಾರವೂ ಸಿಕ್ಕಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“2, 3 ವರ್ಷಗಳಿಂದ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯ ಮುಖಾಂತರ ರೈತರು ಬೆಳೆದ ಬೆಳೆಗಳನ್ನು ಖರೀದಿಸಬೇಕೆಂದು ಆದೇಶವಿದ್ದರೂ ಯಾವೊಂದು ಮಾಲುಗಳನ್ನೂ ಬೆಂಬಲ ಬೆಲೆ ಮುಖಾಂತರ ಖರೀದಿಸುತ್ತಿಲ್ಲ. ಇಂದೇ ಸುರಪುರ ತಾಲೂಕಿನಲ್ಲಿ ಹತ್ತಿ ಖರೀದಿ ಕೇಂದ್ರ, ಭತ್ತದ ಖರೀದಿ ಕೇಂದ್ರ ತೆರೆಯಬೇಕೆಂದು ಮನವಿ ಪತ್ರ ಕೊಟ್ಟರೂ ಪ್ರಯೋಜನವಾಗಿಲ್ಲ. 2 ವರ್ಷಗಳಿಂದ ಮಳೆಯಿಲ್ಲದೆ ನಾರಾಯಣಪೂರ ಮತ್ತು ಆಲಮಟ್ಟಿ ಡ್ಯಾಂನಲ್ಲಿ ನೀರು ಸಂಗ್ರಹವಾಗದೆ ಬೇಸಿಗೆ ಬೆಳೆಗೆ ನೀರು ಕೊಡದೆ ಬೇಸಿಗೆ ಬೆಳೆ ಬೆಳೆಯಲಿಲ್ಲ. ಆದರೆ ಈ ವರ್ಷ ಮಳೆಯಾಗಿ ಈವರೆಗೆ ಒಳ ಹರಿವು ಇರುವುದರಿಂದ ನದಿಗಳಿಗೆ ನೀರು ಬಿಡುವುದನ್ನು ನಿಲ್ಲಿಸಿ ಕೂಡಲೇ ಸಲಹೆ ಸಮಿತಿ ಮಿಟಿಂಗ್ ಕರೆಯಬೇಕು. ಬೇಸಿಗೆ ಬೆಳೆ ಬೆಳೆಯಲು ರೈತರಿಗೆ ಅನುಕೂಲ ಮಾಡಿಕೊಡಬೇಕು. ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

“ಈ ಹಿಂದೆ ಬಹುದಿನಗಳಿಂದ ಸುರಪುರ ತಾಲೂಕಿನಲ್ಲಿ ಬರುವ ರಂಗಂಪೇಟೆಯಲ್ಲಿ ಪ್ರತಿ ಭಾನುವಾರದಂದು ದನದ ಸಂತೆ ನಡೆಯುತಿತ್ತು. ಆದರೆ ಸಂತೆ ನಡೆಯುವ ಜಾಗವನ್ನು ಅಕ್ರಮವಾಗಿ ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ಬಿಲ್ಡಿಂಗ್ ಮಾಡಿ ಸಂತೆ ನಡೆಯದಂತೆ ಮಾಡಿದ್ದಾರೆ. ಕೂಡಲೇ ಪರಿಶೀಲಿಸಿ ಒತ್ತುವರಿ ಮಾಡಿರುವ ಜಾಗವನ್ನು ತೆರವುಗೊಳಿಸಿ ರೈತರಿಗೆ ದನದ ವ್ಯಾಪಾರ ಮಾಡುವುದಕ್ಕೆ ಅನುಕೂಲ ಮಾಡಿಕೊಡಬೇಕು. ಸುರಪುರ ತಹಶೀಲ್ದಾರ್ ಕಚೇರಿಯಲ್ಲಿ ಒಂದೇ ಒಂದು ಪಹಣಿ ಕೇಂದ್ರವಿದ್ದು‌, ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ. ಇನ್ನು ಎರಡ್ಮೂರು ಪಹಣಿ ಕೇಂದ್ರ ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಮತ್ತು ತಹಶೀಲ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ತಾಲೂಕು ಮಟ್ಟದ ಅಥ್ಲೆಟಿಕ್ಸ್‌; ವಂಕಸಂಬರ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಜಿಲ್ಲಾಮಟ್ಟಕ್ಕೆ ಆಯ್ಕೆ

“ಅತಿವೃಷ್ಠಿ ಹಾಗೂ ಅನಾವೃಷ್ಠಿಯಿಂದ ರೈತರ ಬೆಳೆ ಹಾಳಾಗಿರುವುದನ್ನು ಖುದ್ದಾಗಿ ಭೇಟಿಯಾಗಿ ಪರಿಶೀಲಿಸಿದೆ ಕಚೇರಿಯಲ್ಲಿ ಕುಳಿತು ಸುಳ್ಳು ವರದಿಯನ್ನು ತಯಾರಿಸಿ ತಮ್ಮ ಕಚೇರಿಗೆ ಸಲ್ಲಿಸಿ ರೈತರಿಗೆ ವಂಚನೆ ಮಾಡುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಕ್ರಮ ಜರುಗಿಸಿ ತಮ್ಮ ಕಚೇರಿಗೆ ನೈಜ ವರದಿ ಸಲ್ಲಿಸುವಂತೆ ಸೂಚಿಸಬೇಕು. ಇಡೀ ಯಾದಗಿರಿ ಜಿಲ್ಲಾದ್ಯಂತ ಬರುವ ಎಲ್ಲ ತಾಲೂಕುಗಳಲ್ಲಿ ಗ್ರಾಮೀಣ ರಸ್ತೆಗಳು ಹಾಳಾಗಿದ್ದು, ಕೂಡಲೇ ರಸ್ತೆಗಳನ್ನು ದುರಸ್ತಿ ಮಾಡಿಸಬೇಕು” ಎಂಬುದು ಸೇರಿದಂತೆ ಬಹುತೇಕ ಬೇಡಿಕೆಗಳನ್ನಿಟ್ಟು ಈಡೇರಿಸುವಂತೆ ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ಹಣಮಂತ್ರಾಯ ಚಂದಲಾಪೂರ, ಗೌರವಾಧ್ಯಕ್ಷ ಸಾಹೇಬಗೌಡ ಮದಲಿಂಗನಾಳ, ವೆಂಕಟೇಶಗೌಡ ಕುಪಗಲ್, ತಿಪ್ಪಣ್ಣ ಜಂಪಾ, ಭೀಮನಗೌಡ‌ ಕರ್ನಾಳ, ಇಮಾಮಸಾಬ ತಿಪ್ಪನಟಗಿ, ಶಿವನಗೌಡ ರುಕ್ಕಾಪೂರ, ಮಾನಪ್ಪ ಕೊಂಬಿನ್, ಅವಿನಾಶ ಕೊಡೇಕಲ್, ಮರೆಪ್ಪ ಮಾಸ್ಟರ್, ಗದ್ದೆಪ್ಪ ನಾಗದೇವಿನಾಳ, ಪರಮಣ್ಣ ಬಾಣತಿಹಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...