ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

Date:

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ ನಡೆಯುವ ಜಾನುವಾರು ಸಂತೆಯ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡು ಕಟ್ಟಡ ಹಾಗೂ ಅಂಗಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ, ಒತ್ತುವರಿ ತೆರವುಗೊಳಿಸಿ ರೈತರಿಗೆ ಸಂತೆ ನಡೆಸಲು ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

- Advertisement -

ಸೋಮವಾರ ಸುರಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ತಹಸೀಲ್ದಾರರು ಹಾಗೂ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಸುರಪುರ ಮತ್ತು ಹುಣಸಗಿ ತಾಲೂಕುಗಳ ನೂರಾರು ಗ್ರಾಮಗಳ ರೈತರು ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಎತ್ತುಗಳ ಖರೀದಿ, ಹಸು-ಎಮ್ಮೆ ಸೇರಿದಂತೆ ಜಾನುವಾರುಗಳ ಮಾರಾಟ ಹಾಗೂ ಕೃಷಿ ಉತ್ಪನ್ನಗಳ ವಹಿವಾಟಿಗಾಗಿ ರಂಗಪೇಟೆಯ ಸಂತೆಯನ್ನೇ ಅವಲಂಬಿಸಿದ್ದಾರೆ. ಆದರೆ ಸಂತೆ ಜಾಗದಲ್ಲಿ ಖಾಸಗಿಯವರು ಕಟ್ಟಡ ಹಾಗೂ ಅಂಗಡಿಗಳನ್ನು ನಿರ್ಮಿಸಿರುವುದರಿಂದ ಜಾನುವಾರುಗಳನ್ನು ನಿಲ್ಲಿಸಲೂ ಜಾಗವಿಲ್ಲದಂತಾಗಿದೆ. ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

‘ಐತಿಹಾಸಿಕ ಹಿನ್ನೆಲೆಯ ಸುರಪುರದಲ್ಲಿ ಕೃಷಿಯನ್ನೇ ನಂಬಿ ಬದುಕುವ ರೈತರಿಗೆ ಈ ಸಂತೆ ಅತ್ಯಂತ ಪ್ರಮುಖವಾಗಿದೆ. ಅಧಿಕಾರಿಗಳು ಸಂತೆ ಜಾಗದ ಒತ್ತುವರಿ ಕುರಿತು ಪರಿಶೀಲನೆ ನಡೆಸಿ ತೆರವುಗೊಳಿಸಬೇಕು. ಸಾಧ್ಯವಾಗದಿದ್ದರೆ ಪರ್ಯಾಯ ಸರ್ಕಾರಿ ಜಾಗ ಗುರುತಿಸಿ ರೈತರು ಹಾಗೂ ಜಾನುವಾರು ವ್ಯಾಪಾರಿಗಳಿಗೆ ಸಂತೆ ನಡೆಸಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಸಂತೆಗೆ ಆಗಮಿಸುವ ರೈತರು, ಜಾನುವಾರುಗಳು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಜಾನುವಾರುಗಳ ಖರೀದಿ ಮತ್ತು ಮಾರಾಟಕ್ಕೆ ಸರ್ಕಾರದ ಅಧಿಕೃತ ರಸೀದಿ ನೀಡುವ ವ್ಯವಸ್ಥೆ ಮಾಡಬೇಕು. ಕುರಿ, ಮೇಕೆ ಸಾಕಾಣಿಕೆದಾರರು ಮಾರಾಟಕ್ಕಾಗಿ ಶಹಾಪುರ ಮತ್ತು ದೇವದುರ್ಗಕ್ಕೆ ತೆರಳುವ ಅನಿವಾರ್ಯತೆ ತಪ್ಪಿಸಲು ಸುರಪುರದಲ್ಲಿಯೇ ಸಂತೆ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು’ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ರೈತ ಸಂಘದ ತಾಲೂಕು ಗೌರವಾಧ್ಯಕ್ಷ ತಾಹೇಬಗೌಡ ಮದಲಿಂಗನಾಳ, ತಾಲೂಕು ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ತಾಲೂಕು ಅಧ್ಯಕ್ಷ ಹಣಮಂತ್ರಾಯ ಚಂದಲಾಪೂರ ಹಾಗೂ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶೋಷಿತರು, ದಮನಿತರ ನೋವಿಗೆ ಸಾಹಿತ್ಯ ಧ್ವನಿಯಾಗಲಿ: ಡಾ. ಖಾಜಾವಲಿ ಈಚನಾಳ

ಸಾಹಿತ್ಯ ಕೇವಲ ಸಮಾಜದ ಪ್ರತಿಬಿಂಬವಾಗದೆ, ಸಾಮಾಜಿಕ ಬದಲಾವಣೆಗೆ ಪ್ರೇರಕ ಶಕ್ತಿಯಾಗಬೇಕು. ಶೋಷಿತರು,...

ಬಾಗಲಕೋಟೆ |ಎಸ್‌ಸಿಪಿ–ಟಿಎಸ್‌ಪಿ ಯೋಜನೆಗಳ ಪ್ರಗತಿಗೆ ಚುರುಕು ನೀಡಿ; ಜೆ.ಟಿ.ಪಾಟೀಲ

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ...

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...