ಯಾದಗಿರಿ | ವಿದ್ಯುತ್‌ ಸಮಸ್ಯೆ ಬಗೆಹರಿಸದ ಜೆಸ್ಕಾಂ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ವಿದ್ಯುತ್ ಕಂಬಗಳು ಹಾಗೂ ನಗರದಲ್ಲಿ ದಿನನಿತ್ಯ ಆಗುತ್ತಿರುವ ವಿದ್ಯುತ್‌ ಸಮಸ್ಯೆ ಬಗ್ಗೆ ನಿಷ್ಕಾಳಜಿತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ ಜೆಸ್ಕಾಂ ಮುಖ್ಯ ಕಾರ್ಯಪಾಲಕ ‌ಅಭಿಯಂತರರಿಗೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲಾಧಕ್ಷ ರಾಹುಲ್ ಕೊಲ್ಲೂರಕರ್ ಮಾತನಾಡಿ, ʼಯಾದಗಿರಿ ನಗರದ ಕೋಟೆಗಾರವಾಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದುಗಡೆ ವಿದ್ಯುತ್ ಕಂಬ ಮತ್ತು ವೈರ್ ಜೋತು ಬಿದ್ದಿದ್ದು, ಇದರಿಂದ ಶಾಲಾ ಮಕ್ಕಳಿಗೆ ಇಲ್ಲಿನ ನಿವಾಸಿಗಳಿಗೆ ಬಹಳ ತೊಂದರೆ ಆಗುತ್ತಿದೆ. ಏನಾದರೂ ಜೀವಕ್ಕೆ ಅಪಾಯವಾದರೆ ಯಾರೂ ಹೊಣೆ, ಪುಟ್ಟ ಮಕ್ಕಳು ಅಪಾಯದೊಂದಿಗೆ ಬದುಕುತ್ತಿದ್ದಾರೆ. ಇಲ್ಲಿನ ಮನೆ ಪಕ್ಕದಲ್ಲಿ ವಿದ್ಯುತ್ ಕಂಬದ ಕಬ್ಬಿಣದ ಸರಳು ಮುರಿದು ಹೋಗಿದ್ದು ನೆಲಕ್ಕುರುಳುವ ಸ್ಥಿತಿಯಲ್ಲಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

“ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕಾಳಜಿತನ ತೋರಿದ್ದು, ಅಧಿಕಾರಿಗಳಾದ ಜೆಇ, ಎಇಇ ಲೈನ್‌ಮ್ಯಾನ್ 2 ಬಾರಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರು.‌ ಯಾವುದೇ ಕ್ರಮ ಕೈಗೊಂಡಿಲ್ಲ. ಎಇಇ ಕಛೇರಿಗೆ ಹಲವಾರು ಬಾರಿ ಭೇಟಿ ನೀಡಿದರೂ ಕೂಡಾ ನಿರ್ಲಕ್ಷ್ಯ ತೋರಿ ಕರ್ತವ್ಯ ಲೋಪ ಎಸಗಿದ್ದಾರೆ. ನಮ್ಮ ಯಾವುದೇ ಮನವಿ ಪತ್ರಕ್ಕೆ ಹಿಂಬರಹ ನೀಡಿರುವುದಿಲ್ಲ ಹಾಗೂ ಸದರಿ ಕೋಟೆಗಾರವಾಡಾದಲ್ಲಿ ದಿನಕ್ಕೆ 5-6 ಬಾರಿ ಬೇಕಾಬಿಟ್ಟಿಯಾಗಿ ವಿದ್ಯುತ್ ಲೈನ್ ತೆಗೆಯುತ್ತಾರೆ ಲೈನ್ ಜಂಪ್ ಆಗಿ ಟಿವಿ, ಫ್ರಿಡ್ಜ್ ಗಳು ಹಾಳಾಗಿದ್ದು, ಸಾಕಷ್ಟು ಅನಾಹುತಗಳಿ ಆಗಿವೆ. ಅಧಿಕಾರಿಗಳಿಗೆ ಪೋನ್ ಮಾಡಿದರೆ ಕರೆ ಸ್ವೀಕರಿಸುವುದಿಲ್ಲʼ ಎಂದು ದೂರಿದರು.

ಕೂಢಲೇ ನಿಷ್ಕಾಳಜಿ ತೋರಿದ ಜೆಸ್ಕಾಂ ಎಇಇ, ಜೆಇ,‌ ಎಸ್‌ಓ ಅವರ ಮೇಲೆ ಶಿಸ್ತು ಕ್ರಮ ಜರುಗಿಸಿ ಅವರನ್ನು ಅಮಾನತು ಮಾಡಬೇಕು. ಒಂದು ವಾರದಲ್ಲಿ ಸದರಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಮಸ್ಯೆ ಬಗೆಹರಿಸದೇ ಹೋದಲ್ಲಿ ತಮ್ಮ ಕಛೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಬೀದರ್‌ | ಸಿದ್ರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ಶಾಸಕ ಬಿ.ಆರ್.ಪಾಟೀಲ್‌ ಸತ್ಯ ಹೇಳ್ತಾರೆ

ಈ ಸಂದರ್ಭದಲ್ಲಿ ಮೋನಪ್ಪ ಮುನೇಪ್ಪಾನೋರ್, ಆಂಜನೇಯ ಭಂಡಾರಿ, ರಮೇಶ್ ಕೌಳೂರ್, ಹಸೇನ್ ನಾಧಫ್, ರಾಮು ಗಣಪುರ, ಹಣಮಂತ ಕೊಲ್ಲೂರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...