ಯಾದಗಿರಿ | ಮನರೇಗಾ ಕಾರ್ಮಿಕರಿಗೆ ವೇತನ ನೀಡುವಂತೆ ಆಗ್ರಹ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಫಲಾನುಭವಿಗಳಗೆ ಬಾಕಿ ವೇತನ ಕೊಡಬೇಕು ಹಾಗೂ ಇತರರಿಗೂ ಯೋಜನೆ ಅಡಿ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಸಮಿತಿ ಕಾರ್ಯಕರ್ತರು ಧರಣಿ ಮಾಡುವುದರ ಮೂಲಕ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

“ಪ್ರಸ್ತುತ ವರ್ಷ ಸಕಾಲಕ್ಕೆ ಮಳೆಬಾರದೆ ಇರುವುದರಿಂದ ರೈತರು, ಕೂಲಿಕಾರರು ಸಂಕಷ್ಟದಲ್ಲಿದ್ದಾರೆ. ರೈತರನ್ನೇ ನಂಬಿ ಜೀವನ ಮಾಡುತ್ತಿರುವ ಕೂಲಿಕಾರರ ಬದುಕು ಬಹು ದುಸ್ತರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಕೊಡಬೇಕೆಂದು ಮತ್ತು ದುಡಿದವರ ವೇತನ ಕೊಡಬೇಕು” ಎಂದು ಒತ್ತಾಯಿಸಿದರು.

Advertisements

“ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ‌ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಪರಿಹರಿಸುವುದರ ಮೂಲಕ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

“ಫಾರಂ ನಂ.6 ಸ್ವೀಕೃತಿ ಕೊಟ್ಟು ತಕ್ಷಣವೇ ಕಲಸ ಕೊಡಬೇಕು. ಈಗಾಗಲೇ ದುಡಿದವರ ಕೂಲಿ ಹಣ ಕೊಡಲೇಬೇಕು. ನಾಗನಗಿ ಗ್ರಾಂ.ಪಂ.ನ ಕಂಪ್ಯೂಟರ್ ಆಪರೇಟರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಕೆಲಸದ ವೇಳೆ ಮೂಲ ಸೌಲಭ್ಯ ಒದಗಿಸಬೇಕು. ಕೆಲಸದಲ್ಲಿ ಕಾರ್ಯನಿರತರಾಗಿದ್ದಾಗ ಮೃತಪಟ್ಟ ಸಾಹೇಬಗೌಡನ ಕುಟುಂಬಕ್ಕೆ ಪರಿಹಾರ ಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?

“ಅಂಗವಿಕಲರಿಗೆ ಪ್ರತ್ಯೇಕ ಜಾಬ್ ಕಾರ್ಡ ಮಾಡಿಕೊಡಬೇಕು. ನಾಗನಗಿ ಮತ್ತು ಇಬ್ರಾಹಿಂಪೂರ ಗ್ರಾಂ.ಪಂ ಕಾರ್ಯಾಲಯಲ್ಲಿ ಅಲೆದಾಡಿದರೂ ಕೆಲಸ ಕೊಡದೇ ಸತಾಯಿಸುತ್ತಿದ್ದಾರೆ. ದುಡಿದವರಿಗೆ ಕೂಲಿ ಬರದೇ ಬೇರೆಯವರ ಖಾತೆಗೆ ಹಣ ಜಮಾ ಮಾಡುತ್ತಿದ್ದು. ಕೂಡಲೇ ಕೂಲಿ ಕೊಡಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ದವಲಸಾಬ್ ನಧಫ್, ತಾಲೂಕು ಅದ್ಯಕ್ಷೆ ರಂಗಮ್ಮ ಕಟ್ಟಿಮನಿ, ಗುಲಾಂ ಹುಸೇನ, ಕಾರ್ಯದರ್ಶಿ ಸಿದ್ದಯ್ಯ ಬೀರೆಗೊಂಡ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X