ಯಾದಗಿರಿ | ₹20 ಸಾವಿರ ಲಂಚ ಬೇಡಿಕೆ; ಡಿಎಚ್‌ಒ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Date:

ರಾಷ್ಟ್ರೀಯ ಗುಣಮಟ್ಟ ಖಾತ್ರಿಯ ಕಾರ್ಯಕ್ರಮ (ಎನ್‌ಕ್ಯೂಎಎಸ್) ಅಡಿಯಲ್ಲಿ ಬಿಡುಗಡೆಯಾಗಬೇಕಿದ್ದ ₹1,39,750 ಪ್ರೋತ್ಸಾಹಧನದ ಕಡತವನ್ನು ಪೂರ್ಣಗೊಳಿಸಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಕಚೇರಿಯ ಸಿಬ್ಬಂದಿಯೊಬ್ಬರು, ಪೋನ್‌ಪೇ ಮೂಲಕ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

- Advertisement -

ಡಿಎಚ್‌ಒ ಕಚೇರಿಯ ಆಡಳಿತಾತ್ಮಕ ಕಮ್ ಪ್ರೋಗ್ರಾಂ ಸಹಾಯಕರಾಗಿರುವ ಶ್ರೀಕಾಂತ್ ಭಾವಿಮಣಿ ಬಂಧಿತ ಆರೋಪಿ. ಆಳಂದ ನಿವಾಸಿ ಪರಮೇಶ್ವರ ಜಮಾದಾರ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ 7(ಎ) ಅಡಿ ಅಪರಾಧ ಸಂಖ್ಯೆ 07/2026 ದಾಖಲಿಸಿಕೊಂಡು ಬುಧವಾರ ಬಲೆ ಬೀಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ದೂರಿನ ಪ್ರಕಾರ, ಜಿಲ್ಲಾ ಗುಣಮಟ್ಟ ಭರವಸೆ ಘಟಕಕ್ಕೆ ಬಿಡುಗಡೆಯಾಗಿದ್ದ ₹1,39,750 ಪ್ರೋತ್ಸಾಹಧನಕ್ಕೆ ಸಂಬಂಧಿಸಿದ ಕಡತದ ಕೆಲಸ ಪೂರ್ಣಗೊಳಿಸಲು ಆರೋಪಿ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದೂರಿನ ಪರಿಶೀಲನೆಯ ಬಳಿಕ ಲೋಕಾಯುಕ್ತ ಅಧಿಕಾರಿಗಳು ಪೂರ್ವನಿಯೋಜಿತ ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆಯ ವೇಳೆ ಆರೋಪಿ ಪೋನ್‌ಪೇ ಮೂಲಕ ₹20 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತೆಯೇ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದರು.

ಇದನ್ನು ಓದಿದ್ದೀರಾ? ಯಾದಗಿರಿ | ನ್ಯಾಯಾಲಯದ ವಾರಂಟ್ ಮೇರೆಗೆ ನಗರಸಭೆ ಕಚೇರಿ ಸಾಮಗ್ರಿ ಜಪ್ತಿ

ದೂರಿನ ಆಧಾರದಲ್ಲಿ ರೂಪಿಸಲಾದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರೋಪಿಯನ್ನು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸಿದ್ದರಾಜು ಸಿ. ಅವರ ನಿರ್ದೇಶನದಂತೆ ಡಿವೈಎಸ್ಪಿ ಜೆ.ಎಚ್. ಇನಾಮದಾರ್ ನೇತೃತ್ವದಲ್ಲಿ ಪಿಐ ಸಿದ್ರಾಯ ಬಳೂರಗಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆ ಪ್ರತಾಪ್ ಸಿಂಹಗೆ ಇದೆಯೇ? ಮೈಲಾಂಡಹಳ್ಳಿ ಮುರಳಿ ತಿರುಗೇಟು

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ...

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

ಚಿಕ್ಕಮಗಳೂರು | ತಮ್ಮದೇ ಸಮುದಾಯದರಿಂದ ಬಹಿಷ್ಕಾರಗೊಂಡ ಐದು ಕುಟುಂಬ! 

ಗ್ರಾಮಗಳಲ್ಲಿ ಎಲ್ಲಾ ಗ್ರಾಮಸ್ಥರು ಅಣ್ಣ ತಮ್ಮಂದಿರು ಹಾಗೂ ಅಕ್ಕ ತಂಗಿಯರ ಹಾಗಿರುತ್ತಾರೆ....