ಯಾದಗಿರಿ | ದೇವಿಕೇರಾ ಅರಣ್ಯ ಭೂಮಿ ವಿವಾದ: ದಲಿತರ ಮೇಲಿನ ಪ್ರಕರಣ ಖಂಡಿಸಿ ಮನವಿ

Date:

ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಅರಣ್ಯ ಇಲಾಖೆಯ ಜಮೀನಿನಲ್ಲಿ ಬಡ ದಲಿತರು ಸಾಗುವಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.

- Advertisement -

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, “ಅರಣ್ಯ ಇಲಾಖೆಯ ಜಮೀನನ್ನು ಕೆಲವರು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಕೇವಲ ದಲಿತ ಬಡ ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ದೇವಿಕೇರಾ ಗ್ರಾಮದ ಸರ್ವೆ ನಂ.61 ಸೇರಿದಂತೆ ಅರಣ್ಯ ಇಲಾಖೆಯ ಜಮೀನಿನಲ್ಲಿ ಬಡ ಕೃಷಿ ಕಾರ್ಮಿಕರು ಹಾಗೂ ಕೆಲ ರೈತರು ಸಾಗುವಳಿ ಮಾಡುತ್ತಿದ್ದಾರೆ. ಆದರೆ ಸುರಪುರ ವಲಯ ಅರಣ್ಯಾಧಿಕಾರಿ ಭಾಗನಗೌಡ ಅವರು ದಲಿತ ರೈತರಾದ ಗಣಪತಿ ತಂದೆ ರಂಗಪ್ಪ ಚಲುವಾದಿ ಹಾಗೂ ಗುರಮ್ಮ ಗಂಡ ರಂಗಪ್ಪ ಚಲುವಾದಿ ವಿರುದ್ಧ 2025ರ ಆಗಸ್ಟ್ 11ರಂದು ಪ್ರಕರಣ ದಾಖಲಿಸಿದ್ದಾರೆ. ಇದು ತಾರತಮ್ಯದ ಕ್ರಮವಾಗಿದೆ” ಎಂದು ಆರೋಪಿಸಿದರು.

“ಅರಣ್ಯ ಇಲಾಖೆಯ ಜಮೀನು ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ನಡೆಸಿ ವರದಿ ಪಡೆಯಬೇಕು. ದಲಿತರಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿರುವ ಅರಣ್ಯಾಧಿಕಾರಿ ಹಾಗೂ ಗ್ರಾಮದ ವ್ಯಕ್ತಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಈ ಕುರಿತು ಜೂನ್ 4ರಂದು ಸುರಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಗಿತ್ತು. ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಂದ ಜಮೀನು ಸಮೀಕ್ಷೆ ನಡೆಸಿ ವರದಿ ಪಡೆಯುವಂತೆ ಸೂಚಿಸಲಾಗಿದ್ದರೂ, ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ” ಎಂದು ಸಂಘಟನೆ ತಿಳಿಸಿದೆ.

“ಸೆಪ್ಟೆಂಬರ್ 10ರಂದು ಬೆಳಿಗ್ಗೆ 10.30ರೊಳಗೆ ಸಮಸ್ಯೆ ಬಗೆಹರಿಸಿ ನ್ಯಾಯ ಒದಗಿಸದಿದ್ದರೆ, ದೇವಿಕೇರಾ ಕ್ರಾಸ್‌ನ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಕ್ರಮ ಮದ್ಯ ಮಾರಾಟದ ಹಾವಳಿ: ಕಠಿಣ ಕ್ರಮಕ್ಕೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ಈ ಸಂದರ್ಭದಲ್ಲಿ ಹುಲಗಪ್ಪ ಬೈಲಕುಂಟಿ, ಪರಮಣ್ಣ ಕಕ್ಕೇರಾ, ಮಾನಪ್ಪ ಗುಡ್ಡಕಾಯಿ ಕುಂಬಾರಪೇಟೆ, ಗೌತಮ ಕ್ರಾಂತಿ, ನಿಜಪ್ಪ ಸುರಪುರ, ಗುರುಲಿಂಗಪ್ಪ ಕರ್ನಾಳ, ಮಲ್ಲಪ್ಪ ಕ್ಯಾತನಾಳ, ಪರಶುರಾಮ ಸಾಸನೂರ, ಯಂಕಪ್ಪ ದೇವಿಕೇರಿ, ದೇವಪ್ಪ ಪಟ್ಟೆದಾರ, ದುರ್ಗಪ್ಪ ಅರಳಳ್ಳಿ, ದೊಡ್ಡದೇವಿಂದ್ರಪ್ಪ ಬಿ. ಗುಂಡಹಳ್ಳಿ, ಮಲ್ಲಿಕಾರ್ಜುನ ಲಕ್ಷ್ಮೀಪೂರ, ಚಂದ್ರಶೇಖರ ಕಡಪಾವಂಟಣಗಿ, ತಿಪ್ಪಣ್ಣ ಹೂಗಾರ ಶೆಳ್ಳಗಿ, ಬಸವರಾಜ ತಳವಾರಗೇರಾ, ತಿರುಪತಿ ಪೂಜಾರಿ, ಮಲ್ಲಿಕಾರ್ಜುನ ಉಕ್ಕಿನಾಳ, ಮರೆಪ್ಪ ಕೋನ್ಹಾಳ, ಶರಣಪ್ಪ ಕುರುಕುಂದಿ,‌ ರಮೇಶ ಹುಂಡೆಕಲ್, ಹಜರತ್‌ ಬಿ ಮಾ, ಜಮಖಂಡಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...