ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಯಾದಗಿರಿಯಲ್ಲಿ ಪ್ರತಿಭಟನೆ ನಡೆಯಿತು.

- Advertisement -

ನಗರದ ಸುಭಾಷ್‌ಚಂದ್ರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಚುನಾವಣಾ ಆಯೋಗ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಭಟನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಪ್ರಕ್ರಿಯೆಯಾಗಿದೆ. ಆದರೆ ಎಸ್‌ಐಆರ್ ಸಂದರ್ಭದಲ್ಲಿ ಅಗತ್ಯ ದಾಖಲೆಗಳ ಹೆಸರಿನಲ್ಲಿ ಸಾಮಾನ್ಯ ಜನರಿಗೆ ತೊಂದರೆಯಾಗುವ ಹಾಗೂ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬೀಳುವ ಆತಂಕ ಎದುರಾಗಿದೆ ಎಂದು ಆರೋಪಿಸಿದರು.

‘ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಂವಿಧಾನಾತ್ಮಕ ಹಕ್ಕಾಗಿದ್ದು, ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತನಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

Advertisements

‘ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪುರ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಿಂದ ಹೆಚ್ಚಿನ ಸಂಖ್ಯೆಯ ಮತದಾರರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಪಾರದರ್ಶಕತೆ ಮತ್ತು ನ್ಯಾಯಸಮ್ಮತ ಕ್ರಮಗಳನ್ನು ಖಚಿತಪಡಿಸಬೇಕು. ಜನರಿಗೆ ಸೂಕ್ತ ಮಾಹಿತಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅಗತ್ಯ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಅರ್ಹ ಮತದಾರರ ಹೆಸರುಗಳನ್ನು ರಕ್ಷಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ. ಯಾವುದೇ ತಪ್ಪಿನಿಂದಲೂ ಮತದಾರರ ಹೆಸರು ಪಟ್ಟಿಯಿಂದ ಕೈಬೀಳದಂತೆ ಸೂಕ್ತ ಪರಿಶೀಲನೆ ನಡೆಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ನೀಡಿದ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಯಾದಗಿರಿಯಲ್ಲೂ ಪ್ರತಿಭಟನೆ ನಡೆಸಲಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಮತ್ತು ಮತದಾರರ ಹಕ್ಕುಗಳ ರಕ್ಷಣೆಗೆ ಒತ್ತು ನೀಡುವಂತೆ ಮುಖಂಡರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ಸ್ಯಾಟ್ಸನ್ ಮಾಳಿಕೇರಿ, ರಾಜಾ ಗೋಪಾಲ್ ರೆಡ್ಡಿ ಮುದೀರ್, ರಾಘವೇಂದ್ರ ಮಾನಸಗಲ್, ಚಿದಾನಂದಪ್ಪ ಕಾಳೆಬೆಳಗುಂದಿ, ಭೀಮಣ್ಣ ಮೇಟಿ, ಆರೀಫ್ ಕಾಡೂರು, ಮಲ್ಲಣ್ಣ ದಾಸನಕೇರಿ, ಬಾಬುರಾವ್ ಕಣ್ಣೂರು, ರಾಜಕುಮಾರ್ ನಾಯಕ್, ಮಲ್ಲಮ್ಮ ಕೋಮಾರ, ಹೊನೇಶ್ ದೊಡ್ಡಮನಿ, ಮರಿಯಪ್ಪ ಬಿಳ್ತಾರ್, ಸುದರ್ಶನ್ ನಾಯಕ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...