ನ.30ರವರೆಗೆ ನೀರು ಹರಿಸಲು ಆಗ್ರಹಿಸಿ ಯಾದಗಿರಿ ಜಿಲ್ಲೆ ಬಂದ್; ಸರ್ಕಾರಕ್ಕೆ ಸಾಮೂಹಿಕ ಸಂಘಟನೆಗಳ ಎಚ್ಚರಿಕೆ

Date:

ಬಸವಸಾಗರ ಜಲಾಶಯದಿಂದ ರೈತರ ಕೃಷಿ ಬೆಳೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಸರ್ವ ಸಾಮೂಹಿಕ ಸಂಘಟನೆಗಳ ಯಾದಗಿರಿ ವತಿಯಿಂದ ಶುಕ್ರವಾರ ಜಿಲ್ಲಾ ಕೇಂದ್ರ ಬಂದ್ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ರೈತರ ಬೆಳೆಗಳಿಗೆ ನೀರು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರೈತರ ಹಿತ ಕಾಯದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

- Advertisement -

ನಗರದ ತಹಶೀಲ್ದಾರ್ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸುಭಾಷ್ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ನಡೆದ ಬಹಿರಂಗ ಸಭೆಯಲ್ಲಿ ರೈತರ ನೀರಿನ ಹಕ್ಕು, ಕೃಷಿ ಸಂಕಷ್ಟ ಹಾಗೂ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನಮ್ಮ ರೈತರ ಬೆಳೆಗಳಿಗೆ ನೀರಿಲ್ಲ, ಬೇರೆ ರಾಜ್ಯಗಳಿಗೆ ನೀರು ಹರಿಸುತ್ತೀರಾ?

Advertisements

ಪ್ರತಿಭಟನಾಕಾರರು ಮಾತನಾಡಿ, 85 ಟಿಎಂಸಿ ನೀರಿನ ಲಭ್ಯತೆ ಹಾಗೂ ಸಲಹಾ ಸಮಿತಿಯ ನಿರ್ಧಾರಗಳ ಹಿನ್ನೆಲೆಯಲ್ಲಿ ನಮ್ಮ ಭಾಗದ ರೈತರಿಗೆ 15 ಟಿಎಂಸಿ ನೀರು ಹರಿಸಬೇಕೆಂಬ ನ್ಯಾಯಯುತ ಬೇಡಿಕೆ ಇದೆ. ಆದರೆ ಸ್ಥಳೀಯ ರೈತರ ಕೃಷಿ ಅಗತ್ಯಗಳನ್ನು ಕಡೆಗಣಿಸಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕಡೆಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿದರು.

ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವ ಕುರಿತು ಸಲಹಾ ಸಮಿತಿಯಲ್ಲಿ ನಿರ್ಧಾರ ಕೈಗೊಂಡಿದ್ದರೂ, ರೈತರ ಹೊಲಗಳಿಗೆ ನಿರಂತರ ನೀರು ಪೂರೈಸುವಲ್ಲಿ ವಿಳಂಬ ಮಾಡಲಾಗುತ್ತಿದೆ. ಇದರಿಂದ ಕಬ್ಬು, ಸೇಂಗಾ ಸೇರಿದಂತೆ ವಿವಿಧ ಬೆಳೆಗಳು ಒಣಗುವ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರೈತರ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಲಿ: ಮರೆಪ್ಪ ಚಟ್ಟೇಕರ್

ದಸಂಸ ಹಿರಿಯ ಮುಖಂಡ ಮರೆಪ್ಪ ಚಟ್ಟೇಕರ್ ಮಾತನಾಡಿ, ರೈತರ ವೈಜ್ಞಾನಿಕ ಹಾಗೂ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಸಲಹಾ ಸಮಿತಿ ತೀರ್ಮಾನಿಸಿರುವುದರಿಂದ ನವೆಂಬರ್ 30ರವರೆಗೆ ನಿರಂತರ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.

“ಇದು ಯಾವುದೇ ರಾಜಕೀಯ ಪಕ್ಷದ ಹೋರಾಟವಲ್ಲ. ರೈತರ ಬದುಕು ಮತ್ತು ಬೆಳೆಗಳನ್ನು ಉಳಿಸುವ ಉದ್ದೇಶದಿಂದ ಪಕ್ಷಾತೀತವಾಗಿ ನಡೆಸುತ್ತಿರುವ ಹೋರಾಟವಾಗಿದೆ. ಜಿಲ್ಲಾಡಳಿತ ಕೂಡಲೇ ಪ್ರತಿಭಟನಾಕಾರರ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ, ನೀರು ಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ರೈತರನ್ನು ಕಡೆಗಣಿಸಿದರೆ ತಕ್ಕ ಪಾಠ ಕಲಿಸುತ್ತೇವೆ

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ಶರಣು ಗದುಗಿ, ಉಮೇಶ್ ಮುದ್ದನಾಳ, ಲಲಿತಾ ನಾಯಕ, ಹನುಮೇಗೌಡ ಬೀರನಕಲ್, ನ್ಯಾಯವಾದಿ ಭೀಮಶಂಕರ ಸೇರಿದಂತೆ ಹಲವು ಮುಖಂಡರು, ರೈತರ ಬೆಳೆಗಳನ್ನು ಉಳಿಸಲು ಸರ್ಕಾರ ತಕ್ಷಣ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಹಿಂದುಳಿದ ಪ್ರದೇಶಗಳ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ. ನಮ್ಮ ಭಾಗದ ರೈತರ ಹೊಲಗಳಿಗೆ ನೀರು ನೀಡಲು ಹಿಂದೇಟು ಹಾಕಿ ಬೇರೆ ರಾಜ್ಯಗಳಿಗೆ ನೀರು ಹರಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಮೆಣಸಿನಕಾಯಿ, ಸೇಂಗಾ ಹಾಗೂ ಇತರ ಕೃಷಿ ಬೆಳೆಗಳನ್ನು ಉಳಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟದ ಬಗ್ಗೆ ಗಮನ ಹರಿಸಿ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನಿರಂತರ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ

ಯಾದಗಿರಿ ಜಿಲ್ಲಾ ಬಂದ್ ಮೂಲಕ ರೈತರ ನೀರಿನ ಹಕ್ಕಿಗಾಗಿ ವಿವಿಧ ಸಂಘಟನೆಗಳು ಒಗ್ಗಟ್ಟಿನ ಹೋರಾಟ ನಡೆಸಿದ್ದು, ನವೆಂಬರ್ 30ರವರೆಗೆ ನಿರಂತರ ನೀರು ಹರಿಸುವ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಘೋಷಿಸಿದವು.

ಇದನ್ನು ಓದಿದ್ದೀರಾ? ಕಲಬುರಗಿ | ‘ವೋಟ್ ಬಚಾವೋ, ದೇಶ್ ಬಚಾವೋ’; ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ

ಪ್ರತಿಭಟನೆಯಲ್ಲಿ ರೈತಪರ, ದಲಿತಪರ, ಕನ್ನಡಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...