ಯಾದಗಿರಿ | ನುಡಿದಂತೆ ನಡೆದು, ಷರತ್ತು ರಹಿತ ‘ಗ್ಯಾರಂಟಿ’ ಜಾರಿಗೊಳಿಸಿ: ಉಮೇಶ್ ಮುದ್ನಾಳ

Date:

ಕಾಂಗ್ರೆಸ್‌ಗೆ ಜನತೆ ನಿರೀಕ್ಷೆಗೆ ಮೀರಿ ಬೆಂಬಲ ಕೊಟ್ಟಿದ್ದಾರೆ. ಈ ಕಾರಣಕ್ಕೆ ಅತ್ಯುತ್ತಮ ಕೆಲಸ ಮಾಡಬೇಕಿದೆ. ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಕೂಡಲೆ ಜಾರಿ ಮಾಡಿ, ಕೊಟ್ಟ ಮಾತಿನಂತೆ ನಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ್‌ ಕೆ ಮುದ್ನಾಳ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನತೆಗೆ ಮೂಲಸೌಕರ್ಯಗಳು ತ್ವರಿತವಾಗಿ ಸಿಗುವಂತಾಗಲು ಮುಖ್ಯಮಂತ್ರಿ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಬೇಕು. ಉಚಿತ ಘೋಷಣೆಗಳಿಂದ ಜೆಸ್ಕಾಂ ಸಿಬ್ಬಂದಿ, ಬಸ್‌ ಕಂಡಕ್ಟರ್‌ಗಳ ಜೊತೆಗೆ ಜನತೆ ಸಂಘರ್ಷ ನಡೆಯುತ್ತಿದ್ದು, ಇದನ್ನು ತಡೆಯಲು ಜನತಾ ದರ್ಶನ ಮತ್ತು ಪರಿಶೀಲನಾ ಸಭೆ ನಡೆಸಬೇಕು” ಎಂದು ಒತ್ತಾಯಿಸಿದರು.

“ಕಾಂಗ್ರೆಸ್‌ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಭರವಸೆಯನ್ನು ಜನ ಹೊಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳೊಂದಿಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರವಾಸ ಮಾಡಬೇಕು” ಎಂದು ಆಗ್ರಹಿಸಿದರು.

“ರಾಜ್ಯಾದ್ಯಂತ ಸಮಸ್ಯೆಗಳು ನೂರಾರು ಇದ್ದು, ಭ್ರಷ್ಟಾಚಾರ ಮಿತಿಮೀರಿದೆ. ಅಧಿಕಾರಿಗಳು ದಲ್ಲಾಳಿಗಳು ಸಿಬ್ಬಂದಿಗಳ ದರ್ಬಾರ ನಡಸಿದ್ದು ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆರ್‌ಟಿಐ ಕಾರ್ಯಕರ್ತ ಸಾವು ಪ್ರಕರಣ; ಇಬ್ಬರು ಪೊಲೀಸರು ಅಮಾನತು

“ಶಾಲೆ ಆರಂಭ ವಾಗುತ್ತಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜೊತೆಗೆ ರಾಜ್ಯದಾದ್ಯಂತ ಮುಂಗಾರು ಆರಂಭವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಅಗತ್ಯವಾಗಿ ಬೇಕಾಗುವ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಲಿ ಮೂಲ ಸೌಕರ್ಯ ಒದಗಿಸಬೇಕು. 8 ರಿಂದ 10 ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಅಂತರ್ ಜಿಲ್ಲೆಗೆ ವರ್ಗಾವಣೆ ಮಾಡಬೇಕು” ” ಎಂದು ಒತ್ತಾಯಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ...

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ....