ಯಾದಗಿರಿ | ಬೆಳೆ ನಾಶ ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡುವಂತೆ ರೈತ ಸಂಘದ ಆಗ್ರಹ

Date:

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಹತ್ತಿ, ಭತ್ತ, ತೊಗರಿ ಸೇರಿದಂತೆ ಮುಂಗಾರಿನ ಬೆಳೆಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹಸಿ ಬರ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ, ಯಾದಗಿರಿ ಆಗ್ರಹಿಸಿದೆ.

- Advertisement -

ಸೋಮವಾರ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ನಂತರ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟ್ ಮಾತನಾಡಿ, ‘ಈ ವರ್ಷ ಮಳೆಗಾಳಿ ಮತ್ತು ಅನಿಯಮಿತ ಹವಾಮಾನದ ಪರಿಣಾಮವಾಗಿ ಮುಂಗಾರಿನ ಬೆಳೆಗಳು ಸಂಪೂರ್ಣ ಹಾಳಾಗಿವೆ. ಹತ್ತಿ, ಭತ್ತ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳು ನೆಲಕ್ಕುರುಳಿವೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ಬೆಳೆ ಮಾರಾಟಕ್ಕೂ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡಬೇಕು,” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಅವರು ಮುಂದುವರಿಸಿ, ‘ಹಿಂಗಾರಿನ ಬೆಳೆಗೆ ಆಣೆಕಟ್ಟಿನಿಂದ ನೀರು ಒದಗಿಸಲು ನೀರಾವರಿ ಸಲಹಾ ಸಮಿತಿ ತೀರ್ಮಾನವನ್ನು ತಕ್ಷಣ ಪ್ರಕಟಿಸಬೇಕು. ಸರ್ಕಾರ ತಡ ಮಾಡಿದರೆ ರೈತ ಸಂಘವು ರಸ್ತೆಗಿಳಿದು ಹೋರಾಟ ನಡೆಸಲಿದೆ,’ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

ಜಿಲ್ಲಾಧ್ಯಕ್ಷ ಶರಣು ಮಂದರವಾಡ ಮಾತನಾಡಿ, ‘ಅತಿ ಮಳೆಯ ಪರಿಣಾಮವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡಬೇಕು. ಅಲ್ಪಸ್ವಲ್ಪ ಬೆಳೆದಿರುವ ಹತ್ತಿ, ಭತ್ತಕ್ಕೆ ಖರೀದಿ ಕೇಂದ್ರ ತೆರೆಯಬೇಕು ಮತ್ತು ಹಾನಿಗೊಳಗಾದ ಹೊಲಗಳಿಗೆ ಸೂಕ್ತ ಪರಿಹಾರ ನೀಡಬೇಕು,’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಲ್ಕಣ್ಣ ಚಿಂತಿ, ಚಂದ್ರಕಲಾ ಬಾಗೂರು, ಮಲ್ಲಣ್ಣ ನೀಲಹಳ್ಳಿ, ಭೀಮರಾಯ ಎಲೇರಿ, ಪ್ರಭಾಕರರೆಡ್ಡಿ ಕೊಂಗಂಡಿ, ಭೀಮರಾಯ ಹಾಲಗೇರಾ, ಫಕೀರ್ ಅಹ್ಮದ್ ಮರಡಿ ವಡಗೇರಾ, ಶಿವರಾಜ ಕೋನಹಳ್ಳಿ, ದುರ್ಗಪ್ಪ ಕೋನಹಳ್ಳಿ, ಮಂಜುನಾಥ ಕೋನಹಳ್ಳಿ, ದುರ್ಗಪ್ಪ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...