ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ನುಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿಯಿಂದ ಸುರಪುರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಎಪಿಎಂಸಿಯ ಶ್ರಮಿಕರ ಭವನದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುರಪುರ ತಾಲೂಕು ಅಧ್ಯಕ್ಷ ಹಣಮಂತರಾಯ ಮಡಿವಾಳರ ಮಾತನಾಡಿ, “ದೇಶದ ಮಾಜಿ ಪ್ರಧಾನಿಗಳಾಗಿರುವ ಚೌದ್ರಿ ಚರಣಸಿಂಗ್ ಅವರು ಹುತಾತ್ಮರಾದ ದಿನದ ಅಂಗವಾಗಿ ರೈತ ದಿನಾಚರಣೆ ಮಾಡಲಾಗುತ್ತದೆ. ಆದರೆ ಇದನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೀರಶೈವ ಲಿಂಗಾಯತ ಸಮಾಜ ಒಡೆಯಲು ಬಿಡುವುದಿಲ್ಲ: ಶಾಮನೂರು ಶಿವಶಂಕರಪ್ಪ
ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಗೌರವ ಅಧ್ಯಕ್ಷ ಸಾಹೇಬಗೌಡ ಮದಲಿಂಗನಾಳ, ಉಪಾಧ್ಯಕ್ಷ ಗದ್ದೆಪ್ಪ ನಾಗಬೇವಿನಾಳ, ಸುರಪುರ ತಾಲೂಕಿನ ಪ್ರಧಾನ ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ಖಜಾಂಚಿ ರಾಘು ಕುಪಗಲ್, ಗೌರವ ಅಧ್ಯಕ್ಷ ಮಲ್ಲಣ್ಣ ಹಾಲಬಾವಿ, ಸಹಕಾರ್ಯದರ್ಶಿ ಭೀಮಣ್ಣ ತಿಪ್ಪನಟಗಿ, ಶಿವನಗೌಡ ರುಕ್ಖಾಪೂರ, ಮಾನಪ್ಪ ಕೊಂಬಿನ್ ರುಕ್ಖಾಪೂರ, ಯಂಕಪ್ಪ ದಾಸರ ರುಕ್ಕಾಪೂರ ಸೇರಿದಂತೆ ಬಹುತೇಕ ರೈತ ಮುಖಂಡರು ಇದ್ದರು.