ಯಾದಗಿರಿ | ಬರಗಾಲ ಘೋಷಿಸಿ ಎಕರೆಗೆ ₹50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

Date:

ಯಾದಗಿರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಸಮಿತಿಯ ನೇತೃತ್ವದಲ್ಲಿ ಗುರುವಾರ ಸುರಪುರದ ಗಾಂಧಿ ಚೌಕ್‌ನಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಪ್ರತಿಭಟನೆ ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ಮಾತನಾಡಿ, ‘ಜಿಲ್ಲೆಯಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವುದರಿಂದ ರೈತರು ಬಿತ್ತನೆ ಮಾಡಲಾಗದೆ ಹಾಗೂ ಬಿತ್ತಿದ ಬೆಳೆಗಳು ಒಣಗಿ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಸುಟ್ಟುಹೋಗಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು (ಟಿಸಿ) ತ್ವರಿತವಾಗಿ ದುರಸ್ತಿಗೊಳಿಸಿ ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ನಾರಾಯಣಪುರ ಜಲಾಶಯದಲ್ಲಿ ನೀರಿನ ಲಭ್ಯತೆ ಇದ್ದಲ್ಲಿ ಕಾಲುವೆಗಳಿಗೆ ನೀರು ಹರಿಸಿ ಬೆಳೆಗಳಿಗೆ ನೀರಾವರಿ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಎಂಆರ್‌ಪಿ ದರದಲ್ಲಿ ಪೂರೈಸಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುವ ರಸಗೊಬ್ಬರ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎಫ್‌ಐಡಿ ಕಡ್ಡಾಯಗೊಳಿಸಿರುವ ನಿಯಮವನ್ನು ರದ್ದುಪಡಿಸಿ ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ವಿತರಿಸಬೇಕು. ವಿದ್ಯುತ್ ಖಾಸಗೀಕರಣವನ್ನು ಹಿಂಪಡೆದು ಹಿಂದಿನ ವ್ಯವಸ್ಥೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಎಲ್ಲಾ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಿ, ಹೊಸದಾಗಿ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಜಾನಪದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಮುಖಂಡರಾದ ಹಣಮಂತ್ರಾಯ ಚಂದಲಾಪೂರ, ಹನುಮಗೌಡ ನಾರಾಯಣಪೂರ (ಹುಣಸಗಿ), ತಾಲೂಕು ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ಜಿಲ್ಲಾ ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ತಾಲೂಕು ಗೌರವಾಧ್ಯಕ್ಷರಾದ ಮಲ್ಲಣ್ಣ ಹಾಲಭಾವಿ ಹಾಗೂ ಸಾಹೇಬಗೌಡ ಮದಲಿಂಗನಾಳ, ಜಿಲ್ಲಾ ಸದಸ್ಯ ತಿರುಪತಿ ಕುಪಗಲ್ ಸೇರಿದಂತೆ ವಿವಿಧ ಗ್ರಾಮಗಳ ಘಟಕ ಅಧ್ಯಕ್ಷರು, ಪದಾಧಿಕಾರಿಗಳು, ರೈತ ಮುಖಂಡರು ಮತ್ತು ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...