ಯಾದಗಿರಿ | ನಾರಾಯಣಪುರ ಎಡ, ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

Date:

ಮೆಣಸಿನಕಾಯಿ, ಶೇಂಗಾ, ತೊಗರಿ ಹಾಗೂ ಜೋಳ ಸೇರಿದಂತೆ ವಿವಿಧ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಬೆಳೆಗಳು ಕಟಾವಿಗೆ ಬರುವವರೆಗೆ ನಾರಾಯಣಪುರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಗುರುವಾರ ಭೀಮರಾಯನಗುಡಿಯ ಬಾಪುಗೌಡ ದರ್ಶನಾಪುರ ವೃತ್ತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

- Advertisement -

ಧರಣಿಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರು, ಕೃಷ್ಣಾ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿದರೆ ಸಾವಿರಾರು ರೈತರ ಬೆಳೆಗಳನ್ನು ಉಳಿಸಬಹುದು. ರೈತರ ಬದುಕಿನೊಂದಿಗೆ ಸರ್ಕಾರ ಚೆಲ್ಲಾಟವಾಡಬಾರದು. ಹಲವು ಬಾರಿ ಹೋರಾಟ ನಡೆಸಿದರೂ ನೀರಿನ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಸರ್ಕಾರ ಕೂಡಲೇ ಸ್ಪಂದಿಸಿ ನೀರು ಬಿಡುಗಡೆ ಮಾಡದಿದ್ದರೆ ಇಡೀ ಶಹಾಪುರ ತಾಲೂಕು ಬಂದ್ ಮಾಡಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಶರಣು ಮಂದರ್ವಾಡ ಮಾತನಾಡಿ, ಆಗಸ್ಟ್‌ನಿಂದ ಸೆಪ್ಟೆಂಬರ್ 17ರವರೆಗೆ ಕೇವಲ 27 ದಿನ ಮಾತ್ರ ನೀರು ಹರಿಸಿರುವುದರಿಂದ ರೈತರ ಬೆಳೆಗಳಿಗೆ ತೀವ್ರ ತೊಂದರೆಯಾಗಿದೆ. ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ಫೆಬ್ರವರಿವರೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗುವ ಆತಂಕವಿದೆ ಎಂದು ತಿಳಿಸಿದರು.

ಭೀಮಣ್ಣ ಮೇಟಿ ಮಾತನಾಡಿ, ಜಿಲ್ಲೆಯ ಕೊನೆಯ ಭಾಗದ ರೈತರಿಗೆ ಮೆಣಸಿನಕಾಯಿ ಬೆಳೆ ಹೂ ಬಿಡುವ ಹಂತದಲ್ಲಿ ಕನಿಷ್ಠ ಒಂದೂವರೆ ತಿಂಗಳ ಕಾಲ ನಿರಂತರ ನೀರು ಹರಿಸಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ. ಕೇಂದ್ರ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು. ಭೀಮಾ ಮತ್ತು ಕೃಷ್ಣಾ ನದಿಗಳ ನೀರನ್ನು ಸಮರ್ಪಕವಾಗಿ ಬಳಸಿ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಲಿಂಗಣ್ಣ ಸತ್ಯಂಪೇಟೆ ರಚಿಸಿದ ರೈತರ ಸಂಕಷ್ಟ ಹಾಗೂ ಆಕ್ರೋಶವನ್ನು ಬಿಂಬಿಸುವ ‘ಸಾಹಿತ್ಯ ಕೋಪವಿಲೇನೋ, ರೈತ ಕೋಪ ಇಲ್ಲೇನೋ’ ಎಂಬ ಹಾಡನ್ನು ಹಾಡುವ ಮೂಲಕ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಲಾಯಿತು.

3628880

ಹಿರಿಯ ಸಾಹಿತಿ ಶಿವಣ್ಣ ಹಿಜೇರಿ ಮಾತನಾಡಿ, ಬಾಪುಗೌಡ ದರ್ಶನಾಪುರ ಅವರು ಈ ಭಾಗಕ್ಕೆ ನೀರು ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಹೆಸರಿನ ವೃತ್ತದಲ್ಲಿಯೇ ರೈತರು ನೀರಿಗಾಗಿ ಧರಣಿ ನಡೆಸುತ್ತಿರುವುದು ಇಲ್ಲಿನ ರೈತರ ಸಂಕಷ್ಟಕ್ಕೆ ಸಾಕ್ಷಿಯಾಗಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ಮೇಲಿದೆ ಎಂದರು.

ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿ, ರೈತರ ಸಂಕಷ್ಟಕ್ಕೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಸ್ಪಂದಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದೆ ಮಧ್ಯವರ್ತಿಗಳ ಹಾವಳಿಯಿಂದ ಅನ್ಯಾಯವಾಗುತ್ತಿದೆ. ರೈತರ ಹಕ್ಕುಗಳ ರಕ್ಷಣೆಗೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ಮಲ್ಲಣ್ಣ ಚಿಂತೆ, ಫಕೀರ್ ಅಹ್ಮದ್, ಮಲ್ಲಣ್ಣ ವಡಗೇರಾ, ದೇವಿಂದ್ರ ಹೊತ್ತಪೇಠ, ರಂಗಮ್ಮ ಕಟ್ಟಿಮನಿ, ಎಂಕೋಬಾ ವಾಗಣ್ಣಗೇರಾ, ಸುರೇಶ್ ಪರಸ್ತಾಪೂರ್, ಪ್ರಭಾಕರ್ ಪಾಟೀಲ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...