ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

Date:

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿ, ಸುರಪುರ ತಾಲ್ಲೂಕಿನ ಹಸನಾಪುರದಲ್ಲಿರುವ ಕೆಬಿಜೆಎನ್‌ಎಲ್‌ (ಎಸ್‌ಬಿಸಿ) ಉಪವಿಭಾಗ ಸಂಖ್ಯೆ 10ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ರೈತರು ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ನಾಲ್ವಡಿ ವೆಂಕಟಪ್ಪ ನಾಯಕ ವೃತ್ತಕ್ಕೆ ಮಾಲಾರ್ಪಣೆ ಸಲ್ಲಿಸಿದ ಬಳಿಕ ರೈತರು ಮೆರವಣಿಗೆ ಮೂಲಕ ಇಲಾಖೆಯ ಕಚೇರಿಗೆ ತೆರಳಿ ಧರಣಿ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ, ಈಗಾಗಲೇ ತೀವ್ರ ಬರಗಾಲದಿಂದ ತತ್ತರಿಸಿರುವ ರೈತರಿಗೆ ಮತ್ತಷ್ಟು ಅನ್ಯಾಯವಾಗಲು ಬಿಡುವುದಿಲ್ಲ. ಭತ್ತದ ಬೆಳೆ ಕಟಾವಿನ ಅಂತಿಮ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಬೆಳೆಗಳಿಗೆ ನೀರು ಹರಿಸದೆ ಒಳಹರಿವಿಗೆ ನೀರು ಬಿಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ತಕ್ಷಣ ಗೇಟ್‌ಗಳನ್ನು ಎತ್ತಿ ನೀರು ಹರಿಸಬೇಕು. ಇಲ್ಲದಿದ್ದರೆ ರೈತರಿಗೆ ಭಾರಿ ನಷ್ಟವಾಗಲಿದೆ. ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಹಾಪುರದ ಮುಖ್ಯ ಎಂಜಿನಿಯರ್ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. ಮಧ್ಯಾಹ್ನ ರೈತರು ತಾವೇ ಸಂಗ್ರಹಿಸಿದ ಹಣದಲ್ಲಿ ಊಟದ ವ್ಯವಸ್ಥೆ ಮಾಡಿಕೊಂಡು ಪ್ರತಿಭಟನೆ ಮುಂದುವರಿಸಿದರು. ಬಳಿಕ ಅಧಿಕಾರಿಗಳು ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಿದ್ದು, ಅಷ್ಟರೊಳಗೆ ಸಮಸ್ಯೆಗೆ ಪರಿಹಾರ ದೊರೆಯುವ ನಿರೀಕ್ಷೆಯಲ್ಲಿ ರೈತರು ಕಾಯಲು ನಿರ್ಧರಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಜಮೀನು ವಿವಾದ: ಜೋಳದ ಬೆಳೆ ನಾಶ, ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ

ಭತ್ತದ ಬೆಳೆ ಕೈಗೆ ಬರುವ ನಿರ್ಣಾಯಕ ಹಂತದಲ್ಲಿ ನೀರಿನ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ನೀರು ಹರಿಸಿ ಬೆಳೆ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ 7 ಮತ ವಂಚನೆ ಖಂಡಿಸಿ; SIR ವಿರೋಧಿ ಕರ್ನಾಟಕ ಪ್ರತಿಭಟನೆ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಚಿಕ್ಕಮಗಳೂರು | ಮಳೆರಾಯನಿಗಾಗಿ ಕಪ್ಪೆ ಮದುವೆ, ಬಾಡೂಟ ಆಚರಣೆ 

ಮಳೆ ಇಲ್ಲದೆ ಬರದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲಿ ಮಳೆರಾಯನ ಕೃಪೆಗಾಗಿ ಗ್ರಾಮಸ್ಥರೆಲ್ಲರೂ...

ಬಾಗೇಪಲ್ಲಿ | ಅ.16 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪುನಃ ಚೇತನ ಸಭೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಪುನಃ...