ಯಾದಗಿರಿ | ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ ಬಂಧನ: ಕೊಲೆ ಪ್ರಕರಣ ದಾಖಲು

Date:

ಶಹಾಪುರ ತಾಲೂಕಿನ ಗೋಗಿ ಸಮೀಪದ ಕಾಲುವೆಗೆ ತನ್ನ ಇಬ್ಬರು ಮಕ್ಕಳನ್ನು ಎಸೆದ ಆರೋಪದ ಪ್ರಕರಣದಲ್ಲಿ ತಂದೆ ಶಾಂತಪ್ಪನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 103ರ ಅಡಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾಹಿತಿ ನೀಡಿದ ಅವರು, ‘ಶಾಂತಪ್ಪ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲುವೆಗೆ ತನ್ನ ಇಬ್ಬರು ಮಕ್ಕಳನ್ನು ಎಸೆದಿರುವುದಾಗಿ ತಿಳಿಸಿದ್ದ. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

‘ಶಾಂತಪ್ಪ ಮಧ್ಯಾಹ್ನ ಸುಮಾರು 2.15ಕ್ಕೆ ತನ್ನ ಮೂವರು ಮಕ್ಕಳೊಂದಿಗೆ ಬೈಕ್‌ನಲ್ಲಿ ಕಾಲುವೆ ಬಳಿ ತೆರಳಿದ್ದ. ಬಳಿಕ 9 ವರ್ಷದ ಸಾನ್ವಿ ಹಾಗೂ 3 ವರ್ಷದ ಸೃಜನ್‌ ಅವರನ್ನು ಕಾಲುವೆಗೆ ತಳ್ಳಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಹೇಳಿದರು.

‘ರಾತ್ರಿ ವೇಳೆ ಶೋಧ ಕಾರ್ಯಾಚರಣೆ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಅಗ್ನಿಶಾಮಕ ದಳ ಹಾಗೂ ಕೆಬಿಜೆಎನ್‌ಎಲ್ ಅಧಿಕಾರಿಗಳ ಸಹಕಾರದೊಂದಿಗೆ ಶೋಧ ಕಾರ್ಯ ಆರಂಭಿಸಲಾಯಿತು. ಮಧ್ಯಾಹ್ನ ಸೃಜನ್‌ ಹಾಗೂ ಸಂಜೆ ಸಾನ್ವಿಯ ಮೃತದೇಹ ಪತ್ತೆಯಾಗಿದೆ’ ಎಂದು ಎಸ್ಪಿ ತಿಳಿಸಿದರು.

‘ಆರೋಪಿ ಶಾಂತಪ್ಪ ಮಾನಸಿಕವಾಗಿ ತೊಂದರೆ ಅನುಭವಿಸುತ್ತಿರುವ ಸಾಧ್ಯತೆ ಇದೆ. ಮಕ್ಕಳು ತಾಯಿ ರೇಣುಕಾ ಅವರೊಂದಿಗೆ ಹೆಚ್ಚು ಆತ್ಮೀಯರಾಗಿದ್ದು, ತಮ್ಮೊಂದಿಗೆ ಹೊಂದಾಣಿಕೆ ಇರಲಿಲ್ಲ ಎಂದು ವಿಚಾರಣೆ ವೇಳೆ ಆತ ಹೇಳಿದ್ದಾನೆ. ಈ ಎಲ್ಲ ಅಂಶಗಳ ಕುರಿತು ತನಿಖೆ ಮುಂದುವರಿದಿದೆ’ ಎಂದು ಪೃಥ್ವಿಕ್ ಶಂಕರ್ ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕುಖ್ಯಾತ ಮನೆಗಳ್ಳನ ಬಂಧನ: 4 ಪ್ರಕರಣ ಪತ್ತೆ, ₹22.65 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

‘ಪ್ರಕರಣದಲ್ಲಿ ಆರಂಭದಲ್ಲಿ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಇದೀಗ ತನಿಖೆಯ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 103ರ ಅಡಿ ಕೊಲೆ ಪ್ರಕರಣ ದಾಖಲಿಸಿ ಶಾಂತಪ್ಪನನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

ಉಡುಪಿ | ಅಪರಾಧಿಗಳಿಗೆ ಜಾಮೀನು ನೀಡಿರುವುದು ಆಘಾತಕಾರಿ: ಸಾಲಿಡಾರಿಟಿ ಯೂತ್ ಮೂವ್ಮೆಂಟ್

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ...

ಆರೋಗ್ಯ ಆಸ್ಪತ್ರೆಯಲ್ಲಿ ಸಿಗುವ ವಸ್ತುವಲ್ಲ, ನಮ್ಮ ಆಹಾರ ಪದ್ಧತಿಯಲ್ಲಿದೆ : ಸಚಿವ ಎನ್.ಚಲುವರಾಯಸ್ವಾಮಿ

ಆರೋಗ್ಯವೆಂಬುದು ಕೇವಲ ಆಸ್ಪತ್ರೆಗಳಲ್ಲಿ ಸಿಗುವ ವಸ್ತುವಲ್ಲ. ಅದು ನಮ್ಮ ದಿನಚರಿಯಲ್ಲಿ ಅಡಗಿದೆ...

ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...