ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿರುವ ಹೂವಿನ ಅಂಗಡಿಯೊಂದಕ್ಕೆ ಗುರುವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದೆ.
ಬಸವರಾಜ ಹೂಗಾರ ಅವರಿಗೆ ಸೇರಿದ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿ ದಟ್ಟ ಹೊಗೆ ಆವರಿಸಿತು. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಅಂಗಡಿಯಲ್ಲಿದ್ದ ಹೂವುಗಳು, ಅಲಂಕಾರ ಸಾಮಗ್ರಿಗಳು ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ಬಯಲು; ₹5.95 ಲಕ್ಷ ಮೌಲ್ಯದ 17.5 ಟನ್ ಅಕ್ಕಿ ವಶ
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ನಷ್ಟದ ನಿಖರ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ.




