ಯಾದಗಿರಿ | ಜಾನಪದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ

Date:

ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ (ರಿ), ಯಾದಗಿರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ‘ಜಾನಪದ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

- Advertisement -


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುದೋಳ್, ‘ಮೊಬೈಲ್ ಯುಗದಲ್ಲೂ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನ ಅಗತ್ಯವಾಗಿದೆ. ಕಲಾವಿದರನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಅಭಿನಂದನೀಯವಾಗಿವೆ ಎಂದು ಹೇಳಿದರು. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಸರಸ್ವತಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ (ಕೆಎಸ್‌ಎಎಸ್) ವೆಂಕಟೇಶ ಚಟ್ನಳ್ಳಿ ಮಾತನಾಡಿ, ‘ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ. ಯಾದಗಿರಿ ಜಿಲ್ಲೆ ಶೈಕ್ಷಣಿಕ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಇನ್ನಷ್ಟು ಸಾಧನೆ ಮಾಡಬೇಕು’ ಎಂದು ಕರೆ ನೀಡಿದರು.

ವಡಗೇರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಹಿರೇಮಠ ಮಾತನಾಡಿ, ‘ಕಠಿಣ ಪರಿಶ್ರಮ, ಪ್ರಾಮಾಣಿಕತೆ, ನಿಷ್ಠೆ ಮತ್ತು ಸಮಯಪ್ರಜ್ಞೆ ಜೀವನದಲ್ಲಿ ಯಶಸ್ಸಿನ ಮೂಲಮಂತ್ರಗಳಾಗಿವೆ. ವಿದ್ಯಾರ್ಥಿಗಳು ಸ್ಪಷ್ಟ ಗುರಿಯೊಂದಿಗೆ ಶ್ರಮಿಸಿದರೆ ಯಾವುದೇ ಸಾಧನೆ ಅಸಾಧ್ಯವಲ್ಲ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಉತ್ತಮ ಆಡಳಿತ ಸೇವಾರತ್ನ ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುದೋಳ್ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ (ಕೆಎಸ್‌ಎಎಸ್) ವೆಂಕಟೇಶ ಚಟ್ನಳ್ಳಿ ಅವರಿಗೆ ಪ್ರದಾನಿಸಲಾಯಿತು.

ಕರ್ನಾಟಕ ಕಲಾ ರತ್ನ ಪ್ರಶಸ್ತಿಯನ್ನು ಯರಗೋಳದ ಹಿರಿಯ ಬಯಲಾಟ ಕಲಾವಿದ ಯಂಕಣ್ಣ ಮಾಸ್ತರ ಅವರಿಗೆ ಹಾಗೂ ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ಯಾದಗಿರಿ ಮತ್ತು ಕಲಬುರಗಿ ಈದಿನ.ಕಾಮ್ ಜಿಲ್ಲಾ ವರದಿಗಾರರಾದ ಕುಮಾರಿ ಗೀತಾ ಹೊಸಮನಿ ಅವರಿಗೆ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಾಬು ಚವ್ಹಾಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪರಶುರಾಮ, ವೀರಪ್ಪ ಕನ್ನೆಳ್ಳಿ, ಮಹಾದೇವ ಬಾಬಳಿಗ, ಓಂಕಾರ್ ರೆಡ್ಡಿ, ಮಲ್ಲಣ್ಣ ಸಂಕನೂರ, ವಿಜಯಲಕ್ಷ್ಮಿ ಶಾಬಾದಿ, ಚನ್ನಬಸಪ್ಪ ಜೋಗಿ, ಚಂದ್ರಪ್ಪ ಗುಂಜನೂರು, ಜಯಶ್ರೀ ದೇವಣ್ಣ ದೇಸಿ, ಕಲ್ಪನಾ, ರಮೇಶ್, ಯಲ್ಲಾಲಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಭೀಮಾಶಂಕರ ಎಂ. ಯರಗೋಳ ವಹಿಸಿಕೊಂಡಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ನಾಗರಿಕ ಮತಕಾವಲು ಸಮಿತಿಯಿಂದ ಎಸ್‌ಐಆರ್ ಜನಜಾಗೃತಿ ಕಾರ್ಯಗಾರ

ಈ ಸಂದರ್ಭದಲ್ಲಿ ಪ್ರಾರ್ಥನಾ ಗೀತೆ, ಭರತನಾಟ್ಯ, ಸುಗಮ ಸಂಗೀತ, ಭಾವಗೀತೆ, ಸಮೂಹ ನೃತ್ಯ, ಜಾನಪದ ನೃತ್ಯ, ಜಾನಪದ ಸಂಗೀತ, ಲಂಬಾಣಿ ನೃತ್ಯ ಹಾಗೂ ಬಂಜಾರ ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದವು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಶಿಕ್ಷಕರು, ಕಲಾವಿದರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...