ಯಾದಗಿರಿ | ಭೀಕರ ಅಪಘಾತ; ದೇವಸ್ಥಾನಕ್ಕೆ ಹೊರಟಿದ್ದ ನಾಲ್ವರು ದುರ್ಮರಣ

Date:

ಸಾರಿಗೆ ಬಸ್‌ ಮತ್ತು ಬುಲೆರೊ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದೇವಸ್ಥಾನಕ್ಕೆಂದು ಹೊರಟಿದ್ದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಮದ್ದರಕಿ ಬಳಿಯ ‘ರಾಷ್ಟ್ರೀಯ ಹೆದ್ದಾರಿ 150ಎ’ನಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಬುಲೆರೊದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಲೆರೊ ಮತ್ತು ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಮೃತರನ್ನು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ ಬುಲೆರೊ ಚಾಲಕ ಶರಣಪ್ಪ(30), ಸುನೀತಾ (19), ಸೋಮವ್ವ (50) ಹಾಗೂ ತಂಗಮ್ಮ (55) ಎಂದು ಗುರುತಿಸಲಾಗಿದೆ.

ಮೃತರು ಸೇರಿದಂತೆ ಹಲವರು ಬುಲೆರೊ ವಾಹನದಲ್ಲಿ ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಎಸ್​​ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...