ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

Date:

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಜಿಲ್ಲೆಯ 21 ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಕಟ್ಟಿಮನಿ ತಿಳಿಸಿದರು.

- Advertisement -

ನಗರದ ಲುಂಬಿನಿ ಗಾರ್ಡನ್‌ನಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರವಾಸವು ಕೇವಲ ಮನರಂಜನೆಯ ಸಾಧನವಲ್ಲ. ವಿವಿಧ ಪ್ರದೇಶಗಳ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಪ್ರಕೃತಿಯನ್ನು ಅರಿಯುವ ಪ್ರಮುಖ ಮಾರ್ಗವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಯಾದಗಿರಿ ಕೋಟೆ, ಸಣ್ಣಕೆರೆ, ಹತ್ತಿಕುಣಿ ಆಣೆಕಟ್ಟು, ಧಬಧಬಿ ಜಲಪಾತ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಹಾಗೂ ಪ್ರವಾಸಿಗರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು.

ಪ್ರವಾಸಿಗರಿಗೆ ಸ್ಥಳೀಯ ಇತಿಹಾಸ ಮತ್ತು ಪ್ರವಾಸಿ ತಾಣಗಳ ಕುರಿತು ಮಾಹಿತಿ ನೀಡುವುದರ ಜತೆಗೆ ಅವರ ಸುರಕ್ಷತೆಗೆ ಸಹಕರಿಸುವ ಉದ್ದೇಶದಿಂದ 20 ಮಂದಿಗೆ ‘ಪ್ರವಾಸಿ ಮಿತ್ರ’ರಾಗಿ ತರಬೇತಿ ನೀಡಲಾಗಿದೆ. ಈ ಪೈಕಿ 13 ಮಂದಿಯನ್ನು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಸರದಿಯಂತೆ ನಿಯೋಜಿಸಲಾಗಿದೆ ಎಂದು ರಾಮಚಂದ್ರ ಕಟ್ಟಿಮನಿ ತಿಳಿಸಿದರು.

Advertisements

ಕಾರ್ಯಕ್ರಮ ಉದ್ಘಾಟಿಸಿದ ನಗರಾಭಿವೃದ್ಧಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಣ್ಣೂರ, ಪ್ರವಾಸೋದ್ಯಮದ ಬೆಳವಣಿಗೆಯು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ನೀಡುತ್ತದೆ. ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಪ್ರವಾಸಿಗರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ನಂತರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ತಿಪ್ಪಣ್ಣ, ಜಿಲ್ಲಾ ಹೋಂ ಗಾರ್ಡ್ಸ್ ಕಮಾಂಡರ್ ಈರಣ್ಣ, ಕಲಾಶಿಕ್ಷಕ ಮೇಘನಾಥ ಬೆಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...