ಯಾದಗಿರಿ | ಭೀಮಾ ನದಿಯಲ್ಲಿ ಮುಳುಗಿ ಬಾಲಕಿ ಸಾವು!

Date:

ಭೀಮಾ ನದಿಯಲ್ಲಿ ಮುಳುಗಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ವಡಗೇರಾ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಬುಧವಾರ ಸಂಭವಿಸಿದೆ.ಮೃತ ಬಾಲಕಿಯನ್ನು ಜೋಳದಡಗಿ ಗ್ರಾಮದ ಮರೇಮ್ಮ (7) ಎಂದು ಗುರುತಿಸಲಾಗಿದೆ.

- Advertisement -

ಮೃತ ಬಾಲಕಿ ಮೀನುಗಾರ ಕೊಂಡಪ್ಪ ಹಾಗೂ ತಾಯಮ್ಮ ದಂಪತಿಯ ಪುತ್ರಿ ಎನ್ನಲಾಗಿದ್ದು, ಬೆನಕನಹಳ್ಳಿ ಗ್ರಾಮದಲ್ಲಿ ನಡೆದ ಮಾರೇಮ್ಮ ಜಾತ್ರೆಯ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಬಂದಿದ್ದ ಮರೇಮ್ಮ, ಭೀಮಾ ನದಿ ತೀರದಲ್ಲಿ ತಾಯಿಯೊಂದಿಗೆ ತೆರಳಿದ್ದಳು. ಈ ವೇಳೆ ತಾಯಿ ಬಟ್ಟೆ ತೊಳೆಯುತ್ತಿದ್ದಾಗ ತನ್ನ ಮೊಬೈಲ್‌ನ್ನು ಬಾಲಕಿಯ ಕೈಗೆ ನೀಡಿದ್ದರು. ಮೊಬೈಲ್ ನೋಡುತ್ತಾ ನದಿ ತೀರದಲ್ಲಿ ಆಟವಾಡುತ್ತಿದ್ದ ಬಾಲಕಿ ಅಜಾಗರೂಕತೆಯಿಂದ ನೀರಿಗೆ ಇಳಿದಿದ್ದು, ಆಕಸ್ಮಿಕವಾಗಿ ಮುಳುಗಿರುವುದು ಸ್ಥಳೀಯರಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಬಾಲಕಿ ನೀರಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯ ಕೈಗೊಂಡು ಹೊರತೆಗೆದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಡಬೆಂಬಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ.

ಇದನ್ನು ಓದಿದ್ದೀರಾ? ಕಲಬುರಗಿ | ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಘಟನೆ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅನುದಾನ ಬಾರದೆ ಕಿರುಕುಳ ಆರೋಪ: KRDIL ಎಂಜಿನಿಯರ್ ನಾಪತ್ತೆ

ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್ ಡಿಐಎಲ್)...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ; ರೈತ ಚಂ.ಸು ಪಾಟೀಲ್ ಸಾವಯವ ಸಾಧನೆ

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು...