ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

Date:

ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ ಆಹಾರ ಅತ್ಯಗತ್ಯ ಎಂದು ಅಂಗನವಾಡಿ ಶಿಕ್ಷಕಿ ಮಹಾದೇವಮ್ಮ ಕುರ್ಕುಂದಿ ಹೇಳಿದರು.

- Advertisement -

ಶಾಹಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ (ಐಸಿಡಿಎಸ್) ಸಹಯೋಗದಲ್ಲಿ ಆಯೋಜಿಸಿದ್ದ ‘ಪೋಷಣ್ ಮಾಹ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

‘ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದ ಅವರು, ವಿವಿಧ ಹಣ್ಣು, ತರಕಾರಿ ಹಾಗೂ ಆಹಾರ ಧಾನ್ಯಗಳನ್ನು ಪ್ರದರ್ಶಿಸಿ, ಅವುಗಳಲ್ಲಿರುವ ಪೌಷ್ಟಿಕಾಂಶ ಮತ್ತು ಆರೋಗ್ಯ ಪ್ರಯೋಜನಗಳ’ ಕುರಿತು ಮಾಹಿತಿ ನೀಡಿದರು.

‘ಶಾಲೆಯ ಮುಖ್ಯೋಪಾಧ್ಯಾಯ ಈಶ್ವರ ಗೋನಾಳ ಮಾತನಾಡಿ, ಮಕ್ಕಳ ಉತ್ತಮ ಆರೋಗ್ಯ ಮತ್ತು ಬೆಳವಣಿಗೆಗಾಗಿ ಪೋಷಕರು ಪೌಷ್ಟಿಕ ಹಾಗೂ ಸಮತೋಲಿತ ಆಹಾರ ನೀಡಬೇಕು’ ಎಂದರು.

ವರ್ಲ್ಡ್ ವಿಷನ್ ಇಂಡಿಯಾ ಶಹಾಪುರದ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಹಣ್ಣು, ತರಕಾರಿ ಹಾಗೂ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ವಿವಿಧ ಪೌಷ್ಟಿಕ ಆಹಾರ ತಯಾರಿಸುವಂತೆ’ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರಾಸ್ತಾಪುರ, ವಿಭೂತಿಹಳ್ಳಿ, ಗೋಲ್ಗೇರಾ, ಶಾರದಹಳ್ಳಿ ಹಾಗೂ ತಿಪ್ಪನಹಳ್ಳಿ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ತಾಯಂದಿರು, ಮಕ್ಕಳು ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಸಿದ್ದಮ್ಮ ನಾಗಪ್ಪ ಕರ್ಕಿ ಕಾರ್ಯಕ್ರಮ ಉದ್ಘಾಟಿಸಿದರು. ಚಂದ್ರಕಲಾ ರಾಸ್ತಾಪುರ ಪ್ರಾರ್ಥನಾ ಗೀತೆ ಹಾಡಿದರು. ಭಾರತಿ ಕುಲಕರ್ಣಿ ನಿರ್ವಹಿಸಿದರು. ಮೋಹನ್ ಕುಮಾರ್ ಹೊಸಮನಿ ವಂದನಾರ್ಪಣೆ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಕಲಬುರಗಿ ಚಲೋʼ

‘ಪೌಷ್ಟಿಕ ಆಹಾರ–ಆರೋಗ್ಯಕರ ಮಕ್ಕಳು–ಸದೃಢ ಕುಟುಂಬ’ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ...

ಹಳಿಯಾಳ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಪರ್ಸ್‌ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ

ಹಳಿಯಾಳ: ರಸ್ತೆಯಲ್ಲಿ ದೊರೆತ ಚಿನ್ನಾಭರಣ ಹಾಗೂ ನಗದು ಹೊಂದಿದ್ದ ಪರ್ಸ್‌ನ್ನು ಪೊಲೀಸರಿಗೆ...

ಸೆ.27ರಂದು ಜಗನ್ಮೋಹನ್ ಅರಮನೆಯಲ್ಲಿ ‘ಸಾರ್ವಜನಿಕ ಸೀರತ್ ಸಮಾವೇಶ’

ಪ್ರವಾದಿ ಮುಹಮ್ಮದ್(ಸ) ಅವರ ಜೀವನ ಸಂದೇಶ ಹಾಗೂ ಅವರು ಬೋಧಿಸಿದ ಉದಾತ್ತ...

ಬಾಗಲಕೋಟೆ | ಮೀನುಗಾರಿಕೆ ಅಭಿವೃದ್ಧಿ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆ ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ...