ಯಾದಗಿರಿ | ಗೃಹರಕ್ಷಕರಿಗೆ ವರ್ಷಪೂರ್ತಿ ಕರ್ತವ್ಯ, ಸಮಾನ ವೇತನಕ್ಕೆ ಆಗ್ರಹ; ಡಿ.1ರಂದು ಬೆಳಗಾವಿ ಚಲೋ

Date:

ಪೊಲೀಸರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹರಕ್ಷಕ ದಳದ ಸಿಬ್ಬಂದಿಗೆ ಸರ್ಕಾರದ ಸೌಲಭ್ಯಗಳು ಮರೀಚಿಕೆಯಾಗಿವೆ. ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಮಾತ್ರ ಗೌರವಧನ ನೀಡಲಾಗುತ್ತಿದ್ದು, ಉಳಿದ ದಿನಗಳಲ್ಲಿ ಆದಾಯವಿಲ್ಲದೆ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ ವರ್ಷಪೂರ್ತಿ ಕರ್ತವ್ಯ, ಸಮಾನ ವೇತನ ಹಾಗೂ ನಿವೃತ್ತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಡಿ.1ರಂದು ಬೆಳಗಾವಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ.

- Advertisement -

ಗೃಹರಕ್ಷಕರು ಹಬ್ಬ-ಹರಿದಿನಗಳು, ಗಣೇಶೋತ್ಸವ, ಚುನಾವಣೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಬಂದೋಬಸ್ತ್, ಸಂಚಾರ ನಿಯಂತ್ರಣ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಕಾರ್ಯಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹತ್ತಾರು ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ನಿವೃತ್ತಿಯ ನಂತರ ಯಾವುದೇ ಆರ್ಥಿಕ ಭದ್ರತೆ ಇಲ್ಲದೆ ಅನಿಶ್ಚಿತ ಬದುಕು ಎದುರಿಸುವಂತಾಗಿದೆ. ಗೌರವಯುತ ಗೌರವಧನ, ಆರೋಗ್ಯ ವಿಮೆ, ಅಪಘಾತ ವಿಮೆ ಹಾಗೂ ನಿವೃತ್ತಿ ಸೌಲಭ್ಯ ಕಲ್ಪಿಸಬೇಕು ಎಂಬುದು ಅವರ ಬಹುದಿನಗಳ ಬೇಡಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ವರ್ಷಪೂರ್ತಿ ಕರ್ತವ್ಯ ಹಾಗೂ ಸಮಾನ ವೇತನ ನೀಡಬೇಕು. ನಿವೃತ್ತಿ ಸಂದರ್ಭದಲ್ಲಿ ₹10 ಲಕ್ಷ ಇಡುಗಂಟು ಹಾಗೂ ಸೇವಾವಧಿಯಲ್ಲಿ ಮರಣ ಹೊಂದಿದರೆ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಗೃಹರಕ್ಷಕರ ಪೋಷಕರ ಹಕ್ಕು ಸಂರಕ್ಷಣಾ ಸಮಿತಿ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಕೆಕೆಆರ್‌ಡಿಬಿ ನೂತನ ಅಧ್ಯಕ್ಷರಾಗಿ ಬಸನಗೌಡ ದದ್ದಲ್ ಅಧಿಕಾರ ಸ್ವೀಕಾರ

ಸಮಿತಿಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ಅವರ ನೇತೃತ್ವದಲ್ಲಿ ಡಿ.1ರಂದು ಧಾರವಾಡದ ಕಲಾಭವನದಿಂದ ಬೆಳಗಾವಿ ಸುವರ್ಣಸೌಧದವರೆಗೆ ಪಾದಯಾತ್ರೆ ಮೂಲಕ ‘ಬೆಳಗಾವಿ ಚಲೋ’ ಹೋರಾಟ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ಗೃಹರಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಲಿದ್ದಾರೆ. ಸರ್ಕಾರ ಗೃಹರಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...

ಚಿಕ್ಕಮಗಳೂರು | ಎಸ್ಟೇಟ್‌ನಲ್ಲಿ ಕಾರ್ಮಿಕರಿಗೆ ದೌರ್ಜನ್ಯ: ಸಿಪಿಐ (ಎಂಎಲ್) ರೆಡ್ ಸ್ಟಾರ್ ತೀವ್ರ ಖಂಡನೆ

ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಪಕ್ಷದ ಜಿಲ್ಲಾ ಸಮಿತಿ ನಿಯೋಗ...