ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

Date:

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದು ತಾಯಿ-ಮಗಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಶಹಾಪುರ- ಸುರಪುರ ಮುಖ್ಯರಸ್ತೆಯ ರಸ್ತಾಪುರ ಕಮಾನ್‌ ಬಳಿ ಸೋಮವಾರ ನಡೆದಿದೆ.

- Advertisement -

ಮೃತರನ್ನು ತೇಜಸ್ವಿನಿ (30), ಸಹನಾ (22) ಹಾಗೂ ಆರು ವರ್ಷದ ಬಾಲಕಿ ಆರಾಧ್ಯ (6) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಶಹಾಪುರ-ಸುರಪುರ ರಸ್ತೆಯಲ್ಲಿ ಕಾರು ಸಂಚರಿಸುತ್ತಿದ್ದಾಗ ಏಕಾಏಕಿ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಡಿಕ್ಕಿಯ ಭೀಕರ ಸದ್ದು ಕೇಳಿ ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ತಾಯಿ-ಮಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ವಿಷಯ ತಿಳಿದು ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...