ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದೆ.

- Advertisement -

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾಧ್ಯಕ್ಷ ದಾವಲಸಾಬ ನದಾಫ್ ಮಾತನಾಡಿ, ‘ರಾಜ್ಯದ ವಿವಿಧ ಇಲಾಖೆಗಳ ಅಧೀನದಲ್ಲಿರುವ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ನೌಕರರು ಅತ್ಯಂತ ಕಡಿಮೆ ವೇತನದಲ್ಲಿ, ಯಾವುದೇ ಸೇವಾ ಭದ್ರತೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಅನೇಕ ಕಡೆಗಳಲ್ಲಿ ಜಾರಿಗೊಳಿಸಿಲ್ಲ. ಹಲವು ತಿಂಗಳ ಬಾಕಿ ವೇತನವೂ ಪಾವತಿಯಾಗಿಲ್ಲ. ಜೊತೆಗೆ ವಾರಕ್ಕೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕಾರ್ಮಿಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳನ್ನೂ ನೀಡುತ್ತಿಲ್ಲ’ ಎಂದು ಸಂಘ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

‘ಸಂಘವು ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಎಲ್ಲಾ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸುವುದು, ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದು, ಬಾಕಿ ವೇತನವನ್ನು ಪಾವತಿಸುವುದು, ವಾರಕ್ಕೆ ಒಂದು ದಿನ ವೇತನ ಸಹಿತ ರಜೆ ಹಾಗೂ ನಿಗದಿತ ಕೆಲಸದ ಸಮಯ ಜಾರಿಗೊಳಿಸುವುದು, ಇಪಿಎಫ್, ಇಎಸ್‌ಐ ಸೇರಿದಂತೆ ಕಾನೂನುಬದ್ಧ ಕಾರ್ಮಿಕ ಸೌಲಭ್ಯಗಳನ್ನು ಒದಗಿಸುವುದು, ಅಧಿಕೃತ ನೇಮಕಾತಿ ಆದೇಶ ಪತ್ರ ನೀಡುವುದು, ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸುವುದು ಸೇರಿದಂತೆ 14 ಬೇಡಿಕೆಗಳನ್ನು ಈಡೇರಿಸುವಂತೆ’ ಒತ್ತಾಯಿಸಿದರು.

ಇದಲ್ಲದೆ, ‘ರಾಯಚೂರಿನ ಅಲ್ಪಸಂಖ್ಯಾತರ ವಸತಿ ನಿಲಯದಿಂದ ಸೇವೆಯಿಂದ ತೆಗೆದುಹಾಕಿರುವ ಅಡುಗೆ ಸಿಬ್ಬಂದಿಯನ್ನು ಮರುನೇಮಕ ಮಾಡಬೇಕು, ವಸತಿ ಶಾಲೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಸಿಬ್ಬಂದಿಗೆ ವಸತಿ ಸೌಲಭ್ಯ ಹಾಗೂ ಅವರ ಮಕ್ಕಳಿಗೆ ಹಾಸ್ಟೆಲ್ ಪ್ರವೇಶ ಕಲ್ಪಿಸಬೇಕು, 50 ವಿದ್ಯಾರ್ಥಿಗಳಿಗೆ ಮೂರು ಸಿಬ್ಬಂದಿ ಎಂಬ ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು ಹಾಗೂ ಅಡುಗೆಯವರು ಮತ್ತು ಅಡುಗೆ ಸಹಾಯಕರಿಂದ ಶೌಚಾಲಯ ಸ್ವಚ್ಛತಾ ಕೆಲಸ ಮಾಡಿಸಬಾರದು’ ಎಂದು ಒತ್ತಾಯಿಸಲಾಗಿದೆ.

‘ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕಾರ್ಮಿಕ ಇಲಾಖೆ, ಸಂಬಂಧಿತ ಅಧಿಕಾರಿಗಳು, ಹೊರಗುತ್ತಿಗೆ ಏಜೆನ್ಸಿಗಳು ಹಾಗೂ ಸಂಘದ ಮುಖಂಡರ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು. ಕನಿಷ್ಠ ವೇತನ ಆದೇಶ ಜಾರಿಗೊಳಿಸಿ ಬಾಕಿ ವೇತನ ಪಾವತಿಸುವವರೆಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು’ ಎಂದು ಸಂಘ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಇ ಸ್ವತ್ತು 2.0 ತಾಂತ್ರಿಕ ದೋಷ ಸರಿಪಡಿಸಲು ಶಾಸಕರಿಗೆ ಮನವಿ

ಈ ಸಂದರ್ಭದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಹುಲಗಪ್ಪ ಚಲವಾದಿ, ರಾಜ್ಯಾಧ್ಯಕ್ಷ ಭೀಮಶೆಟ್ಟಿ ಎಂಪಳ್ಳಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮನವಿಗೆ ಸಹಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು...