ಯಾದಗಿರಿ | ಮರಣಾಂತಿಕ ಹಲ್ಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಲ್ಲು ಹಲಗಿ

Date:

ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮರಣಾಂತಿಕ ಹಲ್ಲೆ ನಡೆಸಿದೆ ಎಂದು ಆರೋಪಿಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒಳ ಮೀಸಲಾತಿ ಹೋರಾಟಗಾರ ಮಲ್ಲು ಹಲಗಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಹಲ್ಲೆಗೊಳಗಾದ ಭಕ್ತರು ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲ್ಲರನ್ನು ಸಮಾನವಾಗಿ ಗೌರವಿಸಬೇಕಾದ ಸಮಾಜದಲ್ಲಿ ಜಾತಿ ಆಧಾರಿತ ನಿಂದನೆ ಹಾಗೂ ಹಲ್ಲೆಯಂತಹ ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ರಕ್ಷಿಸದೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಆರೋಪಿಗಳನ್ನು ತಕ್ಷಣ ಬಂಧಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

3110515

ರಾಜ್ಯದಲ್ಲಿ ದಲಿತರು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಮರುಕಳಿಸುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಪರಿಣಾಮಕಾರಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಾತಿ ನಿಂದನೆ ಹಾಗೂ ಹಲ್ಲೆಗೊಳಗಾದ ಕುಟುಂಬಗಳಿಗೆ ತಲಾ ₹30 ಲಕ್ಷ ಪರಿಹಾರ, ಭೂಮಿ, ಗಂಗಾ ಕಲ್ಯಾಣ ಹಾಗೂ ವಸತಿ ಯೋಜನೆಗಳ ಸೌಲಭ್ಯ ಕಲ್ಪಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಕ್ಷಣ ಸಂತ್ರಸ್ತ ಕುಟುಂಬಗಳಿಗೆ ಆಹಾರ ಸಾಮಗ್ರಿ ಸೇರಿದಂತೆ ಅಗತ್ಯ ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.

ಹಲ್ಲೆಗೊಳಗಾದ ಮಾದಿಗ ಸಮುದಾಯದ ದಲಿತ ಕುಟುಂಬಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಕಲ್ಪಿಸುವ ಜತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಲ್ಲು ಹಲಗಿ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಈ ಸಂದರ್ಭದಲ್ಲಿ ಹಣಮಂತ ಮಾಲಹಳ್ಳಿ, ಕುಮಾರ್ ತುಮಕೂರು, ಸುರೇಶ್ ಹಾಲಗೇರಾ, ಮರಿಲಿಂಗ ಹೊರಟೂರ, ಬೆಂಜಮಿನ್ ಶಿವನೂರು, ಜಿಬಲಪ್ಪ ಬೆಂಡೆಬೆಂಬಳಿ, ಶಿವು ಮುಂಡರಗಿ, ಭೀಮಶಂಕರ್ ರಟ್ನಡಗಿ ಹಾಗೂ ದೇವು ಕುರಿಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...