ಯಾದಗಿರಿ | ಒಬಿಸಿ ಹಾಸ್ಟೆಲ್‌ನಲ್ಲಿ ಅಸಮರ್ಪಕ ಆಹಾರ ವಿತರಣೆ: ಅಸ್ವಸ್ಥಗೊಂಡ 10 ಮಂದಿ ಆಸ್ಪತ್ರೆಗೆ ದಾಖಲು

Date:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ್ ಹಿಂದುಳಿದ ವರ್ಗಗಳ ಸರ್ಕಾರಿ ಬಾಲಕಿಯರ ವಸತಿ ನಿಲಯ(ಒಬಿಸಿ ಹಾಸ್ಟೆಲ್‌)ದ 10 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥವಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ.‌

- Advertisement -

ವಸತಿ ನಿಲಯದಲ್ಲಿ ಎರಡು ದಿನಗಳಿಂದ ಸರಿಯಾದ ಊಟ‌ದ ವ್ಯವಸ್ಥೆ ಇಲ್ಲದರಿಂದ ವಿದ್ಯಾರ್ಥಿನಿಯರು ಉಪವಾಸವಿದ್ದು, ತಲೆಸುತ್ತು ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದಾರೆ ಎಂಬುದು ಸ್ಥಳೀಯರಿಂದ ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ವಿದ್ಯಾರ್ಥಿನಿಯ ಪಾಲಕ ಪರಮಣ್ಣ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಸತಿ ನಿಲಯದಲ್ಲಿ ಸರಿಯಾದ ಊಟ‌ದ ವ್ಯವಸ್ಥೆ ಇಲ್ಲ. ಒಂದೊತ್ತಿನ ಊಟ ಹಾಕುವುದಿಲ್ಲ, ಹಾಕಿದರೂ ಅಡುಗೆಯಲ್ಲಿ ಉಪ್ಪು, ಖಾರ, ಹುಳಿ ಜಾಸ್ತಿ ಹಾಕುತ್ತಾರೆ. ರುಚಿಕರವಾದ ಅಡುಗೆ ಮಾಡುವುದಿಲ್ಲವೆಂದು ನೀವು ಯಾರಿಗಾದರೂ ಹೇಳಿದರೆ ‌ನಿಮ್ಮನ್ನು ವಸತಿ‌ನಿಲಯದಿಂದ ಹೊರಹಾಕುತ್ತೇವೆಂದು ನಿಲಯದ ಸಿಬ್ಬಂದಿಗಳು, ವಾರ್ಡನ್ ವಿದ್ಯಾರ್ಥಿನಿಯರಿಗೆ ಹೆದರಿಕೆ ಒಡ್ಡಿರುವುದರಿಂದ ಮಕ್ಕಳು ನಮಗೆ ಯಾವುದೇ ವಿಷಯ ತಿಳಿಸಿಲ್ಲ” ಎಂದು ಆರೋಪಿಸಿದರು.

ಆಸ್ಪತ್ರೆಯಲ್ಲಿ ಜಮಾಯಿಸಿದ ಪೋಷಕರು

“ವಿದ್ಯಾರ್ಥಿನಿಲಯದ ಸಿಬ್ಬಂದಿಗಳ ಬೆದರಿಕೆಗೆ ಬೇಸರಗೊಂಡ ವಿದ್ಯಾರ್ಥಿನಿಯರು ಎರಡು ದಿನಗಳಿಂದ ಸರಿಯಾಗಿ ಊಟ ಮಾಡದೆ ಉಪವಾಸ ಇದ್ದರು. ಖಾಲಿ ಹೊಟ್ಟೆಯಲ್ಲಿಯೇ ಶಾಲೆಗೆ ಹೋದ ಸಂದರ್ಭದಲ್ಲಿ ತಲೆಸುತ್ತು ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡಿದ್ದಾರೆ” ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಪ್ಪಾರೆಡ್ಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಿದ್ಯಾರ್ಥಿನಿಯರು ಅಸ್ವಸ್ಥವಾಗಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ನನಗೆ ಇದೀಗ ತಿಳಿದಿದೆ. ಹಾಗಾಗಿ ತಕ್ಷಣ ನಾನು ಸರ್ಕಾರಿ ಆಸ್ಪತ್ರೆಯ ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಿ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿ ಕುರಿತು ವಿಚಾರಿಸಿರುವೆ. ಈಗ ಆಸ್ಪತ್ರೆಗೆ ಹೋಗುತ್ತಿದ್ದೇನೆ” ಎಂದರು.

“ವಿದ್ಯಾರ್ಥಿನಿಯರಿಗೆ ವಸತಿ ನಿಲಯದಲ್ಲಿ ಏನಾದರೂ ಸಮಸ್ಯೆ ಇದ್ದಲ್ಲಿ ಕೂಡಲೇ ನನ್ನನ್ನು ಸಂಪರ್ಕಿಸಿ ಎಂದು ವಸತಿ ನಿಲಯದ ಬೋರ್ಡ್ ಮೇಲೆ ನನ್ನ ನಂಬರ್ ಹಾಗೂ ನನ್ನ ಡ್ರೈವರ್(ವಾಹನ ಚಾಲಕ) ಅವರ ನಂಬರ್ ಕೂಡಾ ಬರೆದಿರುವೆ. ಆದರೆ ಯಾವುದೇ ವಿದ್ಯಾರ್ಥಿನಿಯರು ಈವರೆಗೆ ಯಾವ ಸಮಸ್ಯೆಯನ್ನೂ ಕೂಡಾ ನನ್ನ ಗಮನಕ್ಕೆ ತಮದಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ಗುಬ್ಬಿ | ಜುಲೈ 20 ರಂದು ವಚನ ವಾಚನ ಸ್ಪರ್ಧೆ

ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಆರ್ ವಿ ನಾಯಕ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಸತಿ ನಿಲಯದ ಹತ್ತು‌ ಮಂದಿ ವಿದ್ಯಾರ್ಥಿನಿಯರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಸಮಸ್ಯೆಗೆ ಕಾರಣ ತಿಳಿದುಬಂದಿಲ್ಲ.

ವಿದ್ಯಾರ್ಥಿನಿಯರು ಅಸ್ವಸ್ಥ 3

ವಸತಿನಿಲಯದ ಆಹಾರ, ಕುಡಿಯುವ ನೀರು(ಫುಡ್, ವಾಟರ್) (ಟೆಸ್ಟ್) ಪರೀಕ್ಷೆ ನಡೆದ ಬಳಿಕ ತಿಳಿಯುತ್ತದೆ. ಎಲ್ಲ ವಿದ್ಯಾರ್ಥಿನಿಯರಿಗೆ ಸರಿಯಾಗಿ ಚಿಕಿತ್ಸೆ ‌ನೀಡಲಾಗುತ್ತಿದ್ದು, ಸದ್ಯಕ್ಕೆ ಎಲ್ಲರೂ ಗುಣಮುಖರಾಗುತ್ತಿದ್ದಾರೆ” ಎಂದು ತಿಳಿಸಿದರು.

WhatsApp Image 2026 05 02 at 12.01.27 e1777704270988
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...