ಯಾದಗಿರಿ | ಕಾಳೆಬೆಳಗುಂದಿ ಶಾಲೆಗೆ ಜಾಗ ಗುರುತಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಮನವಿ

Date:

ಗುರುಮಠಕಲ್ ತಾಲೂಕಿನ ಕಾಳೆಬೆಳಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕುಸಿಯುವ ಹಂತದಲ್ಲಿರುವುದರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ತಕ್ಷಣ ಗುರುತಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಸೋಮವಾರ ತಹಶಿಲ್ದಾರ್ ಶಾಂತಗೌಡ ಬಿರಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿ, ‘ಕಾಳೆಬೆಳಗುಂದಿ ಗ್ರಾಮದ ಪರಂಪೋಕ ಭೂಮಿ ಸ.ನಂ. 488 ರಲ್ಲಿ 33 ಎಕರೆ 15 ಗುಂಟೆ ಜಮೀನಿದ್ದು, ಅದರಲ್ಲಿ 1 ಎಕರೆ ಜಮೀನು 2011 ರಲ್ಲಿಯೇ ಜಿಲ್ಲಾಧಿಕಾರಿಗಳ ಆದೇಶದಂತೆ ಶಾಲೆಗೆ ಮಂಜೂರಾಗಿದೆ. ನಕ್ಷೆ ಸಿದ್ಧಪಡಿಸಿದ್ದರೂ ಇಂದಿನವರೆಗೂ ಜಾಗ ಗುರುತಿಸಿ ಹದ್ದುಬಸ್ತು ಮಾಡಿಲ್ಲ,’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಯಾದಗಿರಿ | ಬ್ರಾಹ್ಮಣ್ಯವಾದಿ ಶಕ್ತಿಗಳು ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿವೆ ; ಚಂದ್ರಕಾಂತ ಬಜೇರಿ

ಅವರು ಮುಂದುವರೆದು, ‘ಹಳೆಯ ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿಯುವ ಭೀತಿ ಉಂಟಾಗಿದೆ. ಮಕ್ಕಳು ಜೀವಭಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ. ತಕ್ಷಣ ಜಾಗ ಗುರುತಿಸದಿದ್ದರೆ ತಹಶಿಲ್ದಾರ್ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು,’ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮೇಧಾ, ಕಾರ್ಯಾಧ್ಯಕ್ಷ ನರಸಿಂಹಲು ಗಂಗನೋಳ, ಉಪಾಧ್ಯಕ್ಷ ಕಾಶಪ್ಪ ದೊರೆ, ಭೀಮಶಪ್ಪ ತಲಾರಿ, ರಾಮುಲು ಕೊಡಿಗಂಟಿ, ತಿಮ್ಮಯ್ಯ ನಾಯಕ, ಎಸ್‌ಡಿಎಂಸಿ ಅಧ್ಯಕ್ಷ ಈರದಿಮ್ಮ, ಮರೆಪ್ಪ ನಾಯಕ, ಮಹಾಂತಯ್ಯ ಸ್ವಾಮಿ, ಲಕ್ಷ್ಮಣ ನಾಯಕ, ಮೋಹನರಾಜ, ಸಾಬರೆಡ್ಡಿ ಉಪ್ಪಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...