ಯಾದಗಿರಿ | ವಂದೇ ಭಾರತ ಸ್ಲೀಪರ್ ರೈಲು ಯಾದಗಿರಿ ಮಾರ್ಗವಾಗಿ ಚಲಿಸುವಂತೆ ಆಗ್ರಹಿಸಿ ಕರವೇ ಮನವಿ

Date:

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಆರಂಭವಾಗಲಿರುವ ವಂದೇ ಭಾರತ ಸ್ಲೀಪರ್ ರೈಲಿನ ಸಂಚಾರವನ್ನು ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗುವಂತೆ ಗುಂತಕಲ್-ರಾಯಚೂರು-ಯಾದಗಿರಿ-ಕಲಬುರಗಿ ಮಾರ್ಗದಲ್ಲಿ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

- Advertisement -

ವಂದೇ ಭಾರತ ಸ್ಲೀಪರ್ ರೈಲು ಹುಬ್ಬಳ್ಳಿ ಮಾರ್ಗದಲ್ಲಿ ಸಂಚರಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕರವೇ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಾರ್ಗವನ್ನು ಆಯ್ಕೆ ಮಾಡಿದರೆ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಯಾಣಿಕರಿಗೆ ಮತ್ತೊಮ್ಮೆ ರೈಲು ಸಂಪರ್ಕದಲ್ಲಿ ಅನ್ಯಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಈ ಕುರಿತು ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ನೇತೃತ್ವದಲ್ಲಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ದಕ್ಷಿಣ ಮಧ್ಯ ರೈಲ್ವೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಡಾ. ಆರ್. ಗೋಪಾಲಕೃಷ್ಣನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಬಳಿಕ ಮಾತನಾಡಿ ಮುಖಂಡರು ‘ಗುಂತಕಲ್-ರಾಯಚೂರು-ಯಾದಗಿರಿ-ಕಲಬುರಗಿ ಮಾರ್ಗವು ಮೂರು ರಾಜ್ಯಗಳ ಪ್ರಯಾಣಿಕರಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಈ ಮಾರ್ಗದಲ್ಲಿ ವಂದೇ ಭಾರತ ಸ್ಲೀಪರ್ ರೈಲು ಸಂಚರಿಸಿದರೆ ಕರ್ನಾಟಕದ ಕಲ್ಯಾಣ ಕರ್ನಾಟಕ ಭಾಗದ ಜೊತೆಗೆ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಪ್ರಯಾಣಿಕರು, ಉದ್ಯಮಿಗಳು ಮತ್ತು ವ್ಯಾಪಾರಿಗಳಿಗೆ ವೇಗದ ರೈಲು ಸಂಪರ್ಕ ದೊರೆಯಲಿದೆ’ ಎಂದು ಮುಖಂಡರು ತಿಳಿಸಿದರು.

‘ಇದರ ಜೊತೆಗೆ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಪ್ರಮುಖ ರೈಲುಗಳಿಗೆ ನಿಲುಗಡೆ ನೀಡುವಂತೆ ಕರವೇ ಒತ್ತಾಯಿಸಿದೆ. ಪದ್ಮಾವತಿ, ರಾಜ್‌ಕೋಟ್, ದ್ವಾರಕಾ, ವಾಸ್ಕೋ, ಏಕ್ತಾನಗರ, ಶಿರಡಿ, ಅಹಮದಾಬಾದ್, ಮಧುರೈ, ತಿರುಪತಿ ಹಮ್‌ಸಫರ್ ಹಾಗೂ ಗೋರಖಪುರ ಸೇರಿದಂತೆ ಪ್ರಮುಖ ರೈಲುಗಳ ನಿಲುಗಡೆಗಾಗಿ ಹಲವು ವರ್ಷಗಳಿಂದ ಬೇಡಿಕೆ ಇದ್ದರೂ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕೋವಿಡ್‌ ಸಂದರ್ಭದಲ್ಲಿ ಸ್ಥಗಿತಗೊಂಡ ಸೊಲ್ಲಾಪುರ-ರಾಯಚೂರು ಇಂಟರ್‌ಸಿಟಿ ರೈಲು ಸೇವೆಯನ್ನು ಪುನರಾರಂಭಿಸುವುದು, ಕಲಬುರಗಿ–ಬೆಂಗಳೂರು ನಡುವೆ ಸೂಪರ್‌ಫಾಸ್ಟ್ ಪ್ಯಾಸೆಂಜರ್ ರೈಲು ಆರಂಭಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಮನವಿ ಮಾಡಿದರು.

‘ಯಾದಗಿರಿ ರೈಲ್ವೆ ನಿಲ್ದಾಣದಿಂದ ಪ್ರತಿದಿನ ಸುಮಾರು ₹5ರಿಂದ ₹6 ಲಕ್ಷ ಆದಾಯ ಬರುತ್ತಿದ್ದರೂ, ನಿಲ್ದಾಣಕ್ಕೆ ಅಗತ್ಯ ಸೌಲಭ್ಯಗಳು ದೊರೆತಿಲ್ಲ. ಹೀಗಾಗಿ ನಿಲ್ದಾಣವನ್ನು ‘ಸಿ’ ದರ್ಜೆಯಿಂದ ‘ಬಿ’ ದರ್ಜೆಗೆ ಮೇಲ್ದರ್ಜೆಗೇರಿಸಿ, ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ಕಲ್ಯಾಣ ಕರ್ನಾಟಕದ ರೈಲು ಸಂಪರ್ಕವನ್ನು ಕಡೆಗಣಿಸುವ ಯಾವುದೇ ನಿರ್ಧಾರವನ್ನು ಕರವೇ ಸಹಿಸುವುದಿಲ್ಲ. ವಂದೇ ಭಾರತ ಸ್ಲೀಪರ್ ರೈಲನ್ನು ಯಾದಗಿರಿ ಮಾರ್ಗದಲ್ಲಿ ಓಡಿಸುವ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ರೈತರ ಕಲ್ಯಾಣಕ್ಕಾಗಿ ಸೆ.11ರಂದು ಪಾದಯಾತ್ರೆ

ಈ ಸಂದರ್ಭದಲ್ಲಿ ಮಲ್ಲು ಮಾಳಿಕೇರಿ, ಸಿದ್ದುನಾಯಕ ಹತ್ತಿಕುಣಿ, ಅಂಬ್ರೇಶ ಹತ್ತಿಮನಿ, ಅಬ್ದುಲ್ ಚಿಗಾನೂರ್, ನಿಂಗಪ್ಪ ಗುಡಗಡಿ, ವಿಶ್ವರಾಜ್ ಪಾಟೀಲ್, ಸಿದ್ದಪ್ಪ ಕೊಯಿಲೂರ, ಭೀಮರಾಯ ರಾಮಸಮುದ್ರ, ಹಣಮಂತ ತೇಕರಾಳ, ಅಶೋಕ ನಾಯಕ, ನಾಗು ತಾಂಡರೂಕರ್, ಮಹೇಶ ಠಾಣಗುಂದಿ, ರವಿ ಜಮ್ಮಾರ್, ವೆಂಕಟರೆಡ್ಡಿ ಕೌಳೂರು, ಶರಣು ತಿಂಥಣಿ, ಕಾಶಿನಾಥ ನಾನೇಕ, ಶರಣುಗೌಡ ರಾಮಸಮುದ್ರ, ಮಂಜುನಾಥ, ನಾಗರಾಜ ಪಿಲ್ಲಿ, ತಿಮ್ಮಣ್ಣ ಕಟ್ಟಿಮನಿ, ಸಾಬು ಕೂಡೂರು, ಮರೆಪ್ಪ ಕಡ್ಡಿ, ಸಾಬು ಪೂಜಾರಿ, ನಾಗಪ್ಪ ನಕ್ಕಲ್, ಶರಣು ಹಬ್ಬಳ್ಳಿ, ರವಿ ಗಡ್ಡೆಸೂಗೂರು ಹಾಗೂ ರಮೇಶ ಡಿ. ನಾಯಕ ಸೇರಿದಂತೆ ಕರವೇ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...