ಯಾದಗಿರಿ | ಕೆಬಿಜೆಎನ್‌ಎಲ್ ಭೂಮಿ ಕಬಳಿಕೆ ಆರೋಪ; ಅಕ್ರಮ ಕಟ್ಟಡ ತೆರವಿಗೆ ಸಿದ್ದು ಪಟ್ಟೇದಾರ ಆಗ್ರಹ

Date:

ಕೆಂಭಾವಿ ಪಟ್ಟಣದಲ್ಲಿರುವ ಕೆಬಿಜೆಎನ್‌ಎಲ್‌ಗೆ ಸೇರಿದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಬಳಿಸಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ತಾಲೂಕು ಅಧ್ಯಕ್ಷ ಸಿದ್ದು ಪಟ್ಟೇದಾರ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ನಾರಾಯಣಪುರ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ಕಾರ್ಯಾಚರಣೆ ಮತ್ತು ನಿರ್ವಹಣೆ ವಲಯದ ಮುಖ್ಯ ಅಭಿಯಂತರರಿಗೆ ಲಿಖಿತ ಮನವಿ ಸಲ್ಲಿಸಿರುವ ಅವರು, ಸುರಪುರ ತಾಲೂಕು ಕೆಂಭಾವಿ ಪಟ್ಟಣದ ಸರ್ವೆ ನಂ. 600/2ರಲ್ಲಿರುವ 32 ಗುಂಟೆ ಜಮೀನು ಎಲ್‌ಎಕ್ಯೂ/25/1979-80ರ ಭೂಸ್ವಾಧೀನ ಪ್ರಕ್ರಿಯೆಯಡಿ ಸರ್ಕಾರದಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪ್ರಸ್ತುತ ಈ ಜಮೀನಿನ ಪಹಣಿ (ಆರ್‌ಟಿಸಿ) ಕೆಬಿಜೆಎನ್‌ಎಲ್ ಹೆಸರಿನಲ್ಲಿಯೇ ಇದ್ದರೂ, ಕೆಲವು ಖಾಸಗಿ ವ್ಯಕ್ತಿಗಳು ಅಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದು, ಇನ್ನೂ ನಿರ್ಮಾಣ ಕಾಮಗಾರಿಗಳನ್ನು ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಆಸ್ತಿಯನ್ನು ದುರ್ಬಳಕೆ ಮಾಡಿಕೊಂಡು ಅತಿಕ್ರಮಣ ನಡೆಸುತ್ತಿರುವವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಭೂಮಿಯನ್ನು ಮೂಲ ಸ್ವರೂಪಕ್ಕೆ ತರಲು ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಬಸ್ ಕೊರತೆಗೆ ಬೇಸತ್ತ ಗಡಿಭಾಗದ ಜನ; ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಸಂಕಷ್ಟದ ಕಾಟ

ಈ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ, ಕೆಬಿಜೆಎನ್‌ಎಲ್ ಕಚೇರಿ ಎದುರು ಉಗ್ರ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸಿದ್ದು ಪಟ್ಟೇದಾರ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...