ಯಾದಗಿರಿ | ಮನುಷ್ಯನಿಗೆ ಹಣಕ್ಕಿಂತಲೂ ಜ್ಞಾನ ಬಹಳ ಮುಖ್ಯ: ಅಭಯಾ ದಿವಾಕರ್

Date:

Advertisements

ಮನುಷ್ಯನಿಗೆ ಹಣಕ್ಕಿಂತಲೂ ಜ್ಞಾನ ಬಹಳ ಮುಖ್ಯ ಎಂದು ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷೆ ಅಭಯಾ ದಿವಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾದಗಿರಿ ನಗರದ ವಾಲ್ಮೀಕಿ ಭವನದಲ್ಲಿ ಎಐಡಿಎಸ್‌ಒ ವತಿಯಿಂದ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಮಟ್ಟದ ಮಕ್ಕಳ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಶಿಬಿರದ ಎರಡನೇ ದಿನದಂದು ಆಂಟನ್ ಚೆಕಾವ್ ಅವರ ಸವಾಲು(ದಿ ಬೆಟ್) ಎನ್ನುವ ಕಥೆ ಹೇಳುತ್ತ, ಮನುಷ್ಯನಿಗೆ ದುಡ್ಡಿಗಿಂತಲೂ ಜ್ಞಾನ ಬಹಳ ಮುಖ್ಯ ಎಂದು ಹೇಳಿದರು.

Advertisements

“ಸಾಂಸ್ಕೃತಿಕವಾಗಿ ಹದಗೆಡುತ್ತಿರುವ ಇಂದಿನ ಸಮಾಜದ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ. ಚಿಕ್ಕವಯಸ್ಸಿನ ಮಕ್ಕಳೂ ಕೂಡಾ ಅನೇಕ ದುಶ್ಚಟಗಳಿಗೆ ಬಲಿಯಾಗಿ ಕುಸಂಸ್ಕೃತಿ ಹೆಚ್ಚುತ್ತಿದ್ದು, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ದುರಂತ. ಪ್ರಸ್ತುತ ವ್ಯವಸ್ಥೆಯು ವಿದ್ಯಾರ್ಥಿಗಳ ಸಾಂಸ್ಕೃತಿಕ ಬೆನ್ನೆಲೆಬನ್ನು ಮುರಿಯಲು ದೃಶ್ಯ ಮಾಧ್ಯಮದ ಮೂಲಕ ಅಶ್ಲೀಲತೆಯನ್ನು ಬಿತ್ತುತ್ತಿದೆ. ಇದಕ್ಕೆ ಪರ್ಯಾಯವಾಗಿ ಉನ್ನತ ನೀತಿ-ನೈತಿಕತೆಯನ್ನು ಬಿತ್ತಲು ಸಮಾಜಮುಖಿ ಸಾಹಿತ್ಯವು ಮಹತ್ವದ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ಮಕ್ಕಳು ಓದುವ ಹವ್ಯಾಸ ಬೆಳೆಸಿಕೊಳ್ಳುವ ಜತೆಗೆ ನಿಸ್ವಾರ್ಥ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮಕ್ಕಳ ಶಿಬಿರ

ನಿಸರ್ಗದ ಅನೇಕ ಘಟನೆಗಳ ಹಿಂದಿನ ನಿಯಮಗಳ ತಿಳುವಳಿಕೆ ಇರದಿದ್ದ ಸಂದರ್ಭದಲ್ಲಿ ಮೌಢ್ಯ ಬೆಳೆದುಬಂತು. ಆದರೆ ಅನೇಕ ಪ್ರಶ್ನೆಗಳಿಗೆ ಉತ್ತರದ ಹುಡುಕಾಟದಲ್ಲಿ ಬೆಳೆದು ಬಂದದ್ದು ವಿಜ್ಞಾನ. ಈ ವಿಜ್ಞಾನದ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಪವಾಡ ರಹಸ್ಯ ಬಯಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನು ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹೇಮಂತ್ ಅವರು ನಡೆಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಕೊಡಗು | ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತ ತನಿಖೆ ಆರಂಭ

ಶಿಬಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಎರಡು ದಿನದ ಕಾರ್ಯಾಗಾರದ ತರಬೇತಿಯಲ್ಲಿ ಹಾಡುಗಳು, ನಾಟಕಗಳು ಹಾಗೂ ನೃತ್ಯಗಳ ಪ್ರದರ್ಶನ ನೀಡಲಾಯಿತು.

ಎಐಡಿಎಸ್‌ಒ ಸಮಿತಿಯ ಸದಸ್ಯೆ ದೇವೀಂದ್ರಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಐಡಿಎಸ್‌ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ, ಅಖಿಲ ಭಾರತ ಅಧ್ಯಕ್ಷ ವಿ ಎನ್ ರಾಜಶೇಖರ್ ಸೇರಿದಂತೆ ವಿವಿಧ ಶಾಲೆಗಳ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X