ಯಾದಗಿರಿ | ಎಸ್‌ಟಿ ಪಟ್ಟಿಗೆ ಸೇರ್ಪಡೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಕೋಲಿ-ಕಬ್ಬಲಿಗ ಸಮಾಜ ಬೃಹತ್ ಮೆರವಣಿಗೆ

Date:

Advertisements

ಕೋಲಿ-ಕಬ್ಬಲಿಗ, ಕಬ್ಬೇರ, ಬೆಸ್ತ, ಅಂಬಿಗ ಸಮಾಜ ಸೇರಿದಂತೆಯೇ ಇನ್ನುಳಿದ ಉಪಜಾತಿಗಳನ್ನು ಎಸ್‌ಟಿ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಒಳಗೊಂಡಂತೆ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾ ಕೋಲಿ-ಕಬ್ಬಲಿಗ ಸಮುದಾಯದಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಡಿಗ್ರಿ ಕಾಲೇಜು ಬಳಿ ಜಮಾಯಿಸಿದ ಕೋಲಿ ಸಮಾಜದ ಸಾವಿರಾರು ಜನರು ಸಮಾಜದ ಧರ್ಮಗುರುಗಳ, ಹಿರಿಯ ನೇತೃತ್ವದಲ್ಲಿ ದೊಡ್ಡಮಟ್ಟದ ಪಾದಯಾತ್ರೆ ಮೂಲಕ ರಸ್ತೆಯುದ್ದಕ್ಕೂ ಅಂಬಿಗರ ಚೌಡಯ್ಯ ಹೆಸರಿನ ಜೈಘೋಷಗಳನ್ನು ಮೊಳಗಿಸುತ್ತ ನೇತಾಜಿ ಸರ್ಕಲ್‌ಗೆ ಬಂದು ಜಮಾಗೊಂಡರು.

ಕಲಬುರಗಿ, ಯಾದಗಿರಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಿಂದ ನೂರಾರು ವಾಹನಗಳಲ್ಲಿ ಆಗಮಿಸಿದ ಕೋಲಿ ಸಮಾಜದ ಸಾವಿರಾರು ಪ್ರತಿಭಟನಕಾರರು ಸರ್ಕಲ್ ಬಳಿ ಸುತ್ತುವರೆದು, ಬೇಡಿಕೆಗಳಿಗೆ ಆಗ್ರಹಿಸಿ ನಿರಂತರ ಘೋಷಣೆಗಳುನ್ನು ಕೂಗಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದ್ದು, “ನಿಜಶರಣ ಅಂಬಿಗರ ಚೌಡಯ್ಯ ಅವರನ್ನು ಮತ್ತು ಕೋಲಿ ಸಮಾಜವನ್ನು ಅವಮಾನಿಸಿದವರನ್ನು ಗಡಿಪಾರು ಮಾಡಬೇಕು. ಕೋಲಿ, ಕಬ್ಬಲಿಗ ಸಮಾಜ ಮತ್ತು ಪರ್ಯಾಯ ಪದಗಳನ್ನು ಎಸ್‌ಟಿ ಜಾತಿಗೆ ಸೇರಿಸಬೇಕು. ಕಲಬುರಗಿ ಹೈಕೋರ್ಟ್ ಪೀಠದ ಆದೇಶದಂತೆಯೇ ನಾಯ್ಕ್, ವಾಲ್ಮೀಕಿ, ಬೇಡ, ಬೇಡರ ಜಾತಿಗಳನ್ನು ಅನುಸೂಚಿತ ಬುಡಕಟ್ಟು ಪಟ್ಟಿಯಿಂದ ಈ ಕೂಡಲೇ ಕೈಬೀಡಬೇಕು” ಎಂದು ಆಗ್ರಹಿಸಿದರು.

“ಜಾತಿಗಳ ನಡುವೆ ಜಗಳ ತಂದಿಟ್ಟು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಶ್ರವಣಕುಮಾರ ಔರಾದಿ ಹಾಗೂ ಮರೆಪ್ಪ ನಾಯಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕೋಲಿ ಸಮಾಜದ ಸರ್ಕಾರಿ ನೌಕರರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಕೋಲಿ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿಸಿ ಹರ್ಷಲ್ ಭೋಯರ್, ಎಸ್ ಪಿ ಪೃಥ್ವಿಕ್ ಶಂಕರ್ ಅವರು ವೇದಿಕೆಗೆ ಆಗಮಿಸಿ, ಧರ್ಮಗುರುಗಳು ಹಾಗೂ ಮುಖಂಡರಿಂದ ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಡಿಸಿ ಅವರು, “ಈ ಬೇಡಿಕೆಗಳ ಮನವಿಯನ್ನು ಕೂಡಲೇ ಸರ್ಕಾರಕ್ಕೆ ಕಳುಹಿಸಲಾಗುವುದು” ಎಂದು ಭರವಸೆ ನೀಡಿದರು.

ಪ್ರತಿಭಟನಾನಿರತ ಕೆಲವರು, “ಸಮಾಜದ ಗುರುಗಳಿಗೆ ಅವಮಾನಿಸಿದವರನ್ನು ಕೂಡಲೇ ಬಂಧಿಸುವವರೆಗೂ ಇಲ್ಲಿಂದ ಕದಲುವುದಿಲ್ಲ” ಎಂಬ ಘೋಷಣೆ ಕೂಗಿದಾಗ ಎಸ್‌ಪಿ ಮತ್ತು ಡಿಸಿಯವರು ಕ್ರಮದ ಭರವಸೆ ನೀಡಿದ ನಂತರ ಶಾಂತರಾದರು.

ಈ ಸುದ್ದಿ ಓದಿದ್ದೀರಾ? ಶಿಡ್ಲಘಟ್ಟ | ಏನಿಗಿದಲೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಈ ವೇಳೆ ಸಮಾಜದ ಗುರುಗಳಾದ ತೋನಸನಹಳ್ಳಿ ಶ್ರೀಗಳು, ನಿಜಶರಣ ಅಂಬಿಗರ ಚೌಡಯ್ಯ ಪೀಠದ ಗುರುಗಳು ಹಾಗೂ ಮಾಜಿ ಸಚಿವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಬಾಬುರಾವ ಚಿಂಚನಸೂರ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಹಿರಿಯ ಮುಖಂಡ ಮೌಲಾಲಿ ಅನಪುರ, ಸಾಯಿಬಣ್ಣಾ ಬೋರಬಂಡಾ, ಲಲಿತಾ ಅನಪುರ, ಅವಣ್ಣ ಮ್ಯಾಕೇರಿ, ಬಸವರಾಜ ಬೂದಿಹಾಳ, ಶೋಭಾ ಬಾಣಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೋಸಿ, ನಾಗರತ್ನ ಅನಪುರ ಸೇರಿದಂತೆ ಇತರರು ಮಾತನಾಡಿದರು.

ಕೋಲಿ ಸಮಾಜದ ಪ್ರತಿಭಟನೆಯಿಂದಾಗಿ ನೇತಾಜಿ ಸರ್ಕಲ್ ಬಳಿ ಮೂರು ಗಂಟೆಗೂ ಅಧಿಕ ರಸ್ತೆ ಸಂಚಾರ ಸ್ಥಗಿತಗೊಂಡು ಅನೇಕರು ಪರದಾಡಿದರು. ಎಲ್ಲಡೆ ಪೊಲೀಸ್ ಬಂದೋಬಸ್ತ್‌ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X