ಯಾದಗಿರಿ | ಜಮೀನು ವಿವಾದ: ಜೋಳದ ಬೆಳೆ ನಾಶ, ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ

Date:

ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳಪುರ ಗ್ರಾಮದಲ್ಲಿ ಬಾಂಡ್ ಪತ್ರದ ಮೂಲಕ ಖರೀದಿಸಿದ ಜಮೀನಿನ ವಿಚಾರವಾಗಿ ವಿವಾದ ಉಂಟಾಗಿದ್ದು, ಜಮೀನಿನಲ್ಲಿ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರ್ಯಾಕ್ಟರ್‌ಗಳಿಂದ ನಾಶಪಡಿಸಿ, ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಆರೋಪಿಸಿದೆ.

- Advertisement -

1989ರಲ್ಲಿ 7 ಎಕರೆ 27 ಗುಂಟೆ ಜಮೀನನ್ನು ಬಾಂಡ್ ಪತ್ರದ ಮೂಲಕ ಖರೀದಿಸಿ, ಅಂದಿನಿಂದಲೂ ಕುಟುಂಬದವರು ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಜಮೀನು ಮಾರಾಟ ಮಾಡಿದವರು ಮತ್ತು ಖರೀದಿಸಿದ ವ್ಯಕ್ತಿ ಮೃತಪಟ್ಟ ಬಳಿಕ, ಅನಂತರಡ್ಡಿ ತಂದೆ ಸಾಬರಡ್ಡಿ ಕಾಳೇರ ಎಂಬವರು ಖರೀದಿದಾರರ ಮಗ ಹಾಗೂ ಮೊಮ್ಮಗನಿಂದ ನೋಂದಣಿ ಮತ್ತು ಸ್ಟಾಂಪ್ ಶುಲ್ಕದ ಹೆಸರಿನಲ್ಲಿ ತಲಾ ₹45 ಸಾವಿರದಂತೆ ಒಟ್ಟು ₹90 ಸಾವಿರ ಪಡೆದಿದ್ದಾರೆ. ಆದರೆ, ಜಮೀನಿನ ಸಂಪೂರ್ಣ ಖರೀದಿ ನೋಂದಣಿ ಮಾಡಿಸದೆ, ಒಬ್ಬರಿಗೆ 15 ಗುಂಟೆ ಹಾಗೂ ಮತ್ತೊಬ್ಬರಿಗೆ 16 ಗುಂಟೆ ಜಮೀನನ್ನು ಮಾತ್ರ ದಾನಪತ್ರದ ರೂಪದಲ್ಲಿ ನೋಂದಣಿ ಮಾಡಿಸಿ ವಂಚಿಸಿದ್ದಾರೆ ಎಂದು ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಮಲ್ಲಿಕಾರ್ಜುನ ಮ. ಕ್ರಾಂತಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಅಕ್ಟೋಬರ್ 11ರಂದು ಅನಂತರಡ್ಡಿ ಸೇರಿದಂತೆ ಸುಮಾರು 40ರಿಂದ 50 ಮಂದಿ ಟ್ರ್ಯಾಕ್ಟರ್‌ಗಳೊಂದಿಗೆ ಜಮೀನಿಗೆ ತೆರಳಿ ಜೋಳದ ಬೆಳೆಯನ್ನು ನಾಶಪಡಿಸಿದ್ದಾರೆ. ಇದನ್ನು ತಡೆಯಲು ಮುಂದಾದ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ವಂಚನೆ, ಬೆಳೆ ನಾಶ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ತಕ್ಷಣ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಆಗ್ರಹಿಸಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮಲ್ಲಿಕಾರ್ಜುನ ಮ. ಕ್ರಾಂತಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಳೆರಾಯನಿಗಾಗಿ ಕಪ್ಪೆ ಮದುವೆ, ಬಾಡೂಟ ಆಚರಣೆ 

ಮಳೆ ಇಲ್ಲದೆ ಬರದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲಿ ಮಳೆರಾಯನ ಕೃಪೆಗಾಗಿ ಗ್ರಾಮಸ್ಥರೆಲ್ಲರೂ...

ಬಾಗೇಪಲ್ಲಿ | ಅ.16 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪುನಃ ಚೇತನ ಸಭೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಪುನಃ...

ಹಾವೇರಿ | ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ: ಮೋಹನ ಲಿಂಬಿಕಾಯಿ

ನಾಲ್ಕು ದಶಕಗಳಿಂದ ವಿವಿಧ ಸಂಘಟನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿದ್ದೇನೆ,...