ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

Date:

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ ಸೇರಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಮುಖಂಡರು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.

- Advertisement -

ನಗರದ ಆಶ್ರಯ ಕಾಲೊನಿ ನಿವಾಸಿ, ಬುರ್ರಾ ಕಥಾ ಜಾನಪದ ಕಲಾವಿದೆ ಹಾಗೂ 2014ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಲಕ್ಷ್ಮಿಬಾಯಿ ರೇವಲ್ ಅವರು ಅಕ್ಟೋಬರ್ 15ರಂದು ನಿಧನರಾಗಿದ್ದರು. ಅಕ್ಟೋಬರ್ 16ರಂದು ಕಂದಾಯ ಇಲಾಖೆ ಸಿಬ್ಬಂದಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆಶ್ರಯ ಕಾಲೊನಿಯ ಸರ್ವೆ ನಂ.304ರಲ್ಲಿನ 2 ಎಕರೆ 21 ಗುಂಟೆ ಸರ್ಕಾರಿ ಜಮೀನಿನಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಆದರೆ, ಈ ಜಮೀನಿಗೆ ಹೊಂದಿಕೊಂಡಿರುವ ಸರ್ವೆ ನಂ.303/1ರಲ್ಲಿನ 2 ಎಕರೆ 26 ಗುಂಟೆ ಜಮೀನು ಮಹ್ಮದಿಯ ಟ್ರಸ್ಟ್ ಹೆಸರಿನಲ್ಲಿರುವ ಈದ್ದಾ ಜಾಗವಾಗಿದೆ. ತಮ್ಮ ಜಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಆರೋಪಿಸಿದ ಮುಸ್ಲಿಂ ಮುಖಂಡರು, ಅಂತ್ಯಸಂಸ್ಕಾರ ಮಾಡಿದ ಸ್ಥಳದಿಂದ ಶವವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

Advertisements

ಪ್ರತಿಭಟನೆಯ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ ಹಾಗೂ ಶಹಾಪುರ ಪೊಲೀಸ್ ಠಾಣೆಯ ಪಿಐ ಎಸ್.ಎಂ. ಪಾಟೀಲ ಅವರು ಮುಖಂಡರೊಂದಿಗೆ ಮಾತುಕತೆ ನಡೆಸಿದರು. ವಿವಾದಿತ ಸ್ಥಳದ ಕುರಿತು ಸ್ಪಷ್ಟತೆ ಪಡೆಯಲು ಎರಡೂ ಕಡೆಯವರ ಸಮ್ಮುಖದಲ್ಲಿ ಜಂಟಿ ಸರ್ವೆ ನಡೆಸುವುದು ಸೂಕ್ತ ಎಂದು ಅಧಿಕಾರಿಗಳು ತಿಳಿಸಿದರು.

ಅಧಿಕಾರಿಗಳು ಸರ್ವೆ ನಡೆಸಲು ಸೂಚಿಸಿದ್ದು, ಸರ್ವೆ ತಂಡವು ಮುಖಂಡರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ಮಾಹಿತಿ ನೀಡಿದ್ದಾರೆ. ಸರ್ವೆ ವರದಿಯ ಬಳಿಕ ಜಮೀನಿನ ಗಡಿ ಹಾಗೂ ಮಾಲೀಕತ್ವದ ಕುರಿತು ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ವಿವಾದಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ ಅವರ ಪ್ರತಿಕ್ರಿಯೆ ಪಡೆಯಲು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಲಭ್ಯವಾಗಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...