ಯಾದಗಿರಿ | ವಿಚಾರಣೆಗೆ ಹೋದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ

Date:

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಾರಾಯಣಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ಹುಣಸಗಿ ಕೊಡೇಕಲ್ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಸಿಬ್ಬಂದಿಯ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -

ಮೃತರನ್ನು ವಿಜಯಪುರ ಜಿಲ್ಲೆಯ ಹಡಗಲಿ ಗ್ರಾಮದ ರಾಜೇಸಾಬ ವಾಲಿಕಾರ (65) ಎಂದು ಗುರುತಿಸಲಾಗಿದೆ. ಜಮೀನು ಹಂಚಿಕೆ ವಿಚಾರವಾಗಿ ಐವರು ಅಣ್ಣತಮ್ಮಂದಿರ ನಡುವೆ ಹಲವು ದಿನಗಳಿಂದ ಭಿನ್ನಾಭಿಪ್ರಾಯ ಹಾಗೂ ವ್ಯಾಜ್ಯ ನಡೆಯುತ್ತಿತ್ತು. ಈ ಹಿನ್ನೆಲೆ ಸಮಸ್ಯೆ ಬಗೆಹರಿಸಲು ಕುಟುಂಬದ ಸದಸ್ಯರು ನಾರಾಯಣಪುರ ಪೊಲೀಸ್ ಠಾಣೆಗೆ ಹಾಜರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ವಿಚಾರಣೆ ವೇಳೆ ಅಣ್ಣತಮ್ಮಂದಿರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸುವ ವೇಳೆ ಠಾಣೆಯ ಎಎಸ್‌ಐ ರಾಜೇಸಾಬ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಲ್ಲೆಯ ಬಳಿಕ ರಾಜೇಸಾಬ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು, ನಂತರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಮೃತರ ಬಂಧುಗಳು ಹಾಗೂ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಸತ್ಯಾಸತ್ಯತೆ ಬಹಿರಂಗಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣದ ಕುರಿತು ಸಮಗ್ರ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಮೊಹರಂಕ್ಕೆ ತೆರಳಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ: ಕೊಲೆ ಶಂಕೆ ವ್ಯಕ್ತ

ಘಟನೆಯಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...