ಯಾದಗಿರಿ | ಮಣಿಪುರ ಘಟನೆ: ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ; ದಸಂಸ ಆಗ್ರಹ

Date:

Advertisements

ಮಣಿಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ಯಾದಗಿರಿ ಜಿಲ್ಲೆ ಶಹಾಪುರ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಸಂಚಾಲಕ ಶಿವಪುತ್ರಪ್ಪ ಜವಳಿ ಮಾತನಾಡಿ, “ಭಾರತದ ಸಂವಿಧಾನದಂತೆ ಇಲ್ಲಿನ ಮಹಿಳೆಯರು ಹಾಗೂ ಪುರುಷರು ಸಮಾನರು. ಆದರೆ ಮಹಿಳೆಯರು ಕೀಳು, ಪುರುಷರು ಮೇಲು ಎಂಬ ಭಾವನೆಯಿಂದ ನಡೆಯುವ ಪ್ರವೃತ್ತಿ ಇಂದಿಗೂ ನಿಂತಿಲ್ಲ. ಇದಕ್ಕೆ ಮಣಿಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಈ ಮನಸ್ಥಿತಿ ಬದಲಾಗಬೇಕು, ಜುಲೈ 19ರಂದು ಮೈತೇಯಿ ಸಮುದಾಯದ ಗುಂಪಿನ ಜನರು ಕುಕಿ ಎಂಬ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿ ಸಾಮೂಹಿಕ ಅತ್ಯಚಾರ ಮಾಡುವ ಮೂಲಕ ಅಮಾನವೀಯ ಕೃತ್ಯವೆಸಗಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ರಾಷ್ಟ್ರಪತಿಯವರು ಕೂಡಲೇ ಮಧ್ಯ ಪ್ರವೇಶಿಸಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯದ ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಮಹಿಳೆಯ ಮೇಲೆ ಸಾಮೂಹಿಕ ಅತ್ಯಚಾರವೆಸಗಿ ಹತ್ಯೆ ಮಾಡಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಚಾರ ಮತ್ತು ಹತ್ಯೆ ಎಸಗಿರುವಂತಹ ಆರೋಪಿಗಳ ಮೇಲೆ ಅಪರಾಧ ಪ್ರಕರಣ ದಾಖಲಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಿ ಇಂತಹ ಕೃತ್ಯವೆಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ನೊಂದ ಕುಟುಂಬಗಳಿಗೆ ಸರ್ಕಾರದಿಂದ ಸಹಾಯ ನೀಡಿ ಅಲ್ಲಿರುವ ಆಡಳಿತ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಣಿಪುರ ಘಟನೆ; ಆ.7ರಂದು ಪ್ರತಿಭಟನೆಗೆ ಕರೆ

ಚಂದಪ್ಪ ಮನಿಯೊಪ್ಪನೊರ, ಶಿವಕುಮಾರ ತಳವಾರ, ಶಿವಲಿಂಗ ಹಸನಾಪೂರ, ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಪ್ಪ, ತಾಲೂಕ ಸಂಚಾಲಕಿ ಶಾಂತಿ, ಸಂತೋಷ ನಾಟೇಕರ, ಶರಬ ದೋರನಹಳ್ಳಿ, ವಾಸು ಕೋಗಿಳಕರ, ಶ್ರೀಮಂತ ಸಿಂಗನಹಳ್ಳಿ, ಶರಣಪ್ಪ ಕೋಟಿ ಸೇರಿದಂತೆ ಬಹುತೇಕ ಮಂದಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X