ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲೆ ಸುರಪುರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
“ಭಾರತದ ಸಂವಿಧಾನದಲ್ಲಿ ಸ್ತ್ರೀ ಮತ್ತು ಪುರುಷರು ಸಾಮಾನರೆಂದು ಉಲ್ಲೇಖಿಸಲಾಗಿದೆ. ಆದರೂ ಮಹಿಳೆಯರು ಕೀಳು, ಪುರುಷರು ಮೇಲು ಎಂಬ ಭಾವನೆಯೆಂಬ ಪ್ರವೃತ್ತಿ ಇಂದಿಗೂ ನಿಂತಿಲ್ಲ. ಇದಕ್ಕೆ ಮಣಿಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಈ ಮನಸ್ಥಿತಿ ಬದಲಾಗಬೇಕು, ಜುಲೈ 19ರಂದು ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿ ಸಾಮೂಹಿಕ ಅತ್ಯಚಾರ ಮಾಡುವ ಮೂಲಕ ಅಮಾನೀಯ ಕೃತ್ಯವೆಸಗಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕೂಡಲೇ ರಾಷ್ಟ್ರಪತಿಯವರು ಮಧ್ಯ ಪ್ರವೇಶಿಸಿ ಅಲ್ಲಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ
“ಕರ್ನಾಟಕ ರಾಜ್ಯದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದ ಸೌಜನ್ಯ ಎಂಬ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಚಾರವೆಸಗಿ ಕೊಲೆ ಮಾಡಿರುತ್ತಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಚಾರ ಎಸಗಿ ಕೊಲೆಗೈದಿದ್ದಾರೆ. ಇಂತಹ ಕೃತ್ಯವೆಸಗಿದ ಆರೋಪಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಿ ಇಂತಹ ಕೃತ್ಯವೆಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಸಂತ್ರಸ್ಥ ಕುಟುಂಬಗಳಿಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಅಗ್ರಹಿಸಿದರು.