ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

Date:

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ, ಟಿಪ್ಪರ್ ಮಾಲೀಕರ ಸಂಘದ ನೇತೃತ್ವದಲ್ಲಿ ಸೋಮವಾರ ಯಾದಗಿರಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. 200ಕ್ಕೂ ಹೆಚ್ಚು ಟಿಪ್ಪರ್‌ಗಳೊಂದಿಗೆ ನಗರದಲ್ಲಿ ಮೆರವಣಿಗೆ ನಡೆಸಿದ ಮಾಲೀಕರು ಹಾಗೂ ಚಾಲಕರು ಶಾಸಕರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡ ಶರಣಪ್ಪ ಮಾನೆಗಾರ್ ಬೆಂಬಲ ಸೂಚಿಸಿದರು.

- Advertisement -

ನಗರದ ಗಂಜ್ ಪ್ರದೇಶದಿಂದ ಆರಂಭವಾದ ಟಿಪ್ಪರ್‌ಗಳ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸುಭಾಷ್ ಚಂದ್ರ ವೃತ್ತ ತಲುಪಿತು. ಅಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಮನವಿ ಸಲ್ಲಿಸಿ, ಶಾಸಕರು ತಮ್ಮ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಶರಣಪ್ಪ ಮಾನೆಗಾರ್, “ಟಿಪ್ಪರ್ ಮಾಲೀಕರು ಶೋಕಿಗಾಗಿ ವಾಹನ ಖರೀದಿಸಿಲ್ಲ; ಕುಟುಂಬ ನಿರ್ವಹಣೆ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಸಾಲ ಮಾಡಿ ವಾಹನಗಳನ್ನು ಖರೀದಿಸಿದ್ದಾರೆ” ಎಂದು ಹೇಳಿದರು. ಅಕ್ರಮ ಚಟುವಟಿಕೆಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳು ಕಾನೂನು ಪ್ರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ. ಆದರೆ, ಕಾನೂನುಬದ್ಧವಾಗಿ ಜೀವನ ನಡೆಸುವವರನ್ನು ಬೆದರಿಸುವ ರೀತಿಯ ಹೇಳಿಕೆಗಳು ಸರಿಯಲ್ಲ ಎಂದು ಆಕ್ಷೇಪಿಸಿದರು.

ಟಿಪ್ಪರ್‌ಗಳಿಂದ ರಸ್ತೆಗಳು ಹಾಳಾಗುತ್ತಿವೆ ಎಂಬ ಆರೋಪಗಳಿದ್ದರೆ, ರಸ್ತೆ ಕಾಮಗಾರಿಗಳ ಗುಣಮಟ್ಟ ಮತ್ತು ಗುತ್ತಿಗೆದಾರರ ಹೊಣೆಗಾರಿಕೆಯ ಬಗ್ಗೆಯೂ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಅಹಿಂದ ರಾಜ್ಯ ಮುಖಂಡ ಹನುಮೇಗೌಡ ಬೀರನಕಲ್, ಉಮೇಶ ಮುದ್ದಾಳ, ತೇಜರಾಜ್ ರಾಠೋಡ್ ಸೇರಿದಂತೆ ಹಲವು ಮುಖಂಡರು ಮಾತನಾಡಿ, ಶಾಸಕರ ಹೇಳಿಕೆಯ ಕುರಿತು ಪರಿಶೀಲನೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಟಿಪ್ಪರ್ ಮಾಲೀಕರು ಮತ್ತು ಚಾಲಕರಿಗೆ ವಿನಾಕಾರಣ ತೊಂದರೆ ನೀಡಬಾರದು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಸುಮಾರು ಮೂರು ಗಂಟೆಗಳ ಕಾಲ ನಡೆದ ಪ್ರತಿಭಟನೆಯಿಂದ ನಗರದ ಕೆಲವು ರಸ್ತೆಗಳಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ಅಡಚಣೆ ಉಂಟಾಯಿತು. ಟಿಪ್ಪರ್ ಮಾಲೀಕರ ಸಂಘದ ಅಧ್ಯಕ್ಷ ರಘುಪತಿ, ಶಶಾಂಕ, ಪ್ರವೀಣಕುಮಾರ, ಮಲ್ಲು ಮಾಳಿಕೇರಿ, ಮಲ್ಲಯ್ಯ, ರವಿಕುಮಾರ, ಭೀಮರಾಯ ಬಂಕಲಗಿ, ಮಲ್ಲಣ್ಣ, ಎಂ.ಡಿ. ಶೋಫ್, ಪರಶುರಾಮ ನಾಯಕ, ಕಾಶಿನಾಥ ಸೇರಿದಂತೆ ಸಂಘದ ಪದಾಧಿಕಾರಿಗಳು, ಟಿಪ್ಪರ್ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...