ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

Date:

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಅಂಜುಮನ್ ತಾರಕೀ ಉರ್ದು ಯಾದಗಿರಿ ಘಟಕ ಆಗ್ರಹಿಸಿದೆ.

- Advertisement -

ಘಟಕದ ಅಧ್ಯಕ್ಷ ಡಾ. ರಫೀಕ್ ಸೌದಾಗರ್ ನೇತೃತ್ವದಲ್ಲಿ ದಕ್ಷಿಣ ಮಧ್ಯ ರೈಲ್ವೆಯ ಸಿಕಂದರಾಬಾದ್‌ನ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದ್ದು, ಯಾದಗಿರಿ ಜಿಲ್ಲೆಗೆ ಅಗತ್ಯವಿರುವ ವೇಗದ ರೈಲು ಸಂಪರ್ಕದ ಕುರಿತು ಗಮನ ಸೆಳೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಯಾದಗಿರಿ ಜಿಲ್ಲಾ ಕೇಂದ್ರವಾಗಿದ್ದು, ಕಲ್ಯಾಣ ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾಗಿದೆ. ಜಿಲ್ಲೆಯ ಸಾವಿರಾರು ಜನರು ಪ್ರತಿನಿತ್ಯ ಶಿಕ್ಷಣ, ಉದ್ಯೋಗ, ಚಿಕಿತ್ಸೆ, ವ್ಯಾಪಾರ ಹಾಗೂ ಇತರೆ ಅಗತ್ಯಗಳಿಗಾಗಿ ಬೆಂಗಳೂರು, ಮುಂಬೈ, ಪುಣೆ ಸೇರಿದಂತೆ ಮಹಾನಗರಗಳಿಗೆ ತೆರಳುತ್ತಿದ್ದಾರೆ. ಆದರೆ ಪ್ರಮುಖ ರೈಲುಗಳಿಗೆ ಯಾದಗಿರಿಯಲ್ಲಿ ಸಮರ್ಪಕ ನಿಲುಗಡೆ ಇಲ್ಲದಿರುವುದರಿಂದ ಪ್ರಯಾಣಿಕರು ಪರ್ಯಾಯ ನಿಲ್ದಾಣಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿಯಲ್ಲಿ ನಿಲುಗಡೆ ಕಲ್ಪಿಸಿದರೆ ಜಿಲ್ಲೆಯ ಜನರಿಗೆ ಬೆಂಗಳೂರು ಮತ್ತು ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ವೇಗದ, ಸುರಕ್ಷಿತ ಹಾಗೂ ಸುಗಮ ಪ್ರಯಾಣದ ಸೌಲಭ್ಯ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಿಗಳು, ರೋಗಿಗಳು ಹಾಗೂ ಸಾಮಾನ್ಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ ಯಾದಗಿರಿ ಜಿಲ್ಲೆಯ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಡಾ. ರಫೀಕ್ ಸೌದಾಗರ್ ಮನವಿ ಮಾಡಿದ್ದಾರೆ.

Advertisements

ಪ್ರಯಾಣಿಕರ ಸಂಖ್ಯೆ, ಜಿಲ್ಲೆಯ ಜನರ ಅಗತ್ಯತೆ ಹಾಗೂ ಯಾದಗಿರಿಯ ಭೌಗೋಳಿಕ ಮಹತ್ವವನ್ನು ಪರಿಗಣಿಸಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ನಿಲ್ದಾಣದಲ್ಲಿ ನಿಲುಗಡೆ ಮಂಜೂರು ಮಾಡುವಂತೆ ರೈಲ್ವೆ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಈ ಸಂದರ್ಭದಲ್ಲಿ ಇಮ್ರಾನ್ ಅಹ್ಮದ್, ಜಾಫರ್, ಇಫೆಕರ್ ಅಹಮ್ಮದ್, ಅಜ್ಜು, ಸನಾವುಲ್ಲಾ, ಸಾಜಿದ್ ಅಹಮ್ಮದ್, ಶಕೀಲ್ ಅಹಮದ್, ಲಕ್ಷ್ಮಣ, ಹಣಮಂತ ಖಾನಳ್ಳಿ ಹಾಗೂ ಮಹಮ್ಮದ್ ರಾಜಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...