ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

Date:

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಶಹಾಪುರ ನಗರಕ್ಕೆ ಪ್ರತ್ಯೇಕ ಸಂಚಾರ ಪೊಲೀಸ್‌ ಠಾಣೆ ಮತ್ತು ಹತ್ತಿಗೂಡೂರ ಗ್ರಾಮದಲ್ಲಿ ಗ್ರಾಮೀಣ ಪೊಲೀಸ್‌ ಠಾಣೆ ಆರಂಭಿಸುವಂತೆ ಒತ್ತಾಯಿಸಿ ಸಮತಾ ಸೈನಿಕ ದಳದ ಜಿಲ್ಲಾ ಘಟಕದ ಅಧ್ಯಕ್ಷ ಶರಣರಡ್ಡಿ ಹತ್ತಿಗೂಡೂರ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಬಳಿಕ ಮಾತನಾಡಿದ ಅವರು ‘ಶಹಾಪುರ ನಗರವು ಬೀದರ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಶಹಾಪುರ–ಯಾದಗಿರಿ ಹೆದ್ದಾರಿಗಳ ಸಂಪರ್ಕ ಕೇಂದ್ರವಾಗಿರುವುದರಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿವೆ. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣಕ್ಕೆ ಪ್ರತ್ಯೇಕ ಪೊಲೀಸ್‌ ವ್ಯವಸ್ಥೆ ಅಗತ್ಯವಿದೆ. ಪ್ರತ್ಯೇಕ ಸಂಚಾರ ಠಾಣೆ ಆರಂಭವಾದರೆ ರಸ್ತೆ ಸುರಕ್ಷತೆ, ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಅನುಕೂಲವಾಗಲಿದೆ’ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದರೊಂದಿಗೆ ‘ಶಹಾಪುರ ಪೊಲೀಸ್‌ ಠಾಣೆಯ ವ್ಯಾಪ್ತಿಗೆ 60ಕ್ಕೂ ಹೆಚ್ಚು ಗ್ರಾಮಗಳು ಒಳಪಟ್ಟಿವೆ. ವಿಶಾಲ ಭೌಗೋಳಿಕ ವ್ಯಾಪ್ತಿಯ ಕಾರಣ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಒತ್ತಡ ಎದುರಿಸುತ್ತಿದ್ದಾರೆ. ಹೀಗಾಗಿ ಹತ್ತಿಗೂಡೂರಿನಲ್ಲಿ ಗ್ರಾಮೀಣ ಪೊಲೀಸ್‌ ಠಾಣೆ ಸ್ಥಾಪಿಸುವ ಮೂಲಕ ಸುತ್ತಮುತ್ತಲಿನ ಗ್ರಾಮಗಳ ಪೊಲೀಸ್‌ ಸೇವೆಯನ್ನು ಸುಲಭಗೊಳಿಸಬೇಕು’ ಎಂದು ಮನವಿ ಮಾಡಿದ್ದಾರೆ.

‘ಹತ್ತಿಗೂಡೂರ ಗ್ರಾಮವು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದು, ಪೊಲೀಸ್‌ ಠಾಣೆ ಸ್ಥಾಪನೆಗೆ ಸೂಕ್ತ ಸ್ಥಳವಾಗಿದೆ. ಯುಕೆಪಿ ನಿಗಮಕ್ಕೆ ಸೇರಿದ ವಿಶಾಲ ಜಾಗ, ವಸತಿಗೃಹ ಹಾಗೂ ಸರ್ಕಾರಿ ಜಮೀನು ಲಭ್ಯವಿರುವುದರಿಂದ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅನುಕೂಲವಿದೆ. ಪ್ರತಿ ವರ್ಷ ಠಾಣೆ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

‘ಸಾರ್ವಜನಿಕರ ಸುರಕ್ಷತೆ ಮತ್ತು ಉತ್ತಮ ಪೊಲೀಸ್‌ ಸೇವೆಯ ದೃಷ್ಟಿಯಿಂದ ಶಹಾಪುರ ನಗರದಲ್ಲಿ ಸಂಚಾರ ಪೊಲೀಸ್‌ ಠಾಣೆ ಹಾಗೂ ಹತ್ತಿಗೂಡೂರಿನಲ್ಲಿ ಗ್ರಾಮೀಣ ಪೊಲೀಸ್‌ ಠಾಣೆ ಸ್ಥಾಪನೆಗೆ ಸರ್ಕಾರ ಕೂಡಲೇ ಅನುಮೋದನೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಈಸಂದರ್ಭದಲ್ಲಿ ಮುಖಂಡರಾದ ತಿಪ್ಪಣ್ಣಗೌಡ ಬಳಬಟ್ಟಿ, ಶಂಕರಲಿಂಗಯ್ಯ ಹಾಗೂ ಗುರುಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...