ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

Date:

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಸುರಪುರ ತಾಲೂಕು ಸಮಿತಿ ವತಿಯಿಂದ ಭಾನುವಾರ ಶಾಸಕ ರಾಜಾ ವೇಣುಗೋಪಾಲ ನಾಯಕರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷೆ ಶಾಹೇಜಾದಿಬೇಗಂ ಮಾತನಾಡಿ, ‘ಬಿಸಿಯೂಟ ಯೋಜನೆ ಆರಂಭವಾಗಿ 25 ವರ್ಷಗಳು ಕಳೆದಿದ್ದು, ಶಾಲಾ ಮಕ್ಕಳಿಗೆ ಆಹಾರ ಒದಗಿಸುವ ಜತೆಗೆ ಅಡುಗೆ, ಮೊಟ್ಟೆ ಬೇಯಿಸುವುದು, ರಾಗಿ ಮಾಲ್ಟ್ ಹಾಗೂ ಹಾಲು ವಿತರಣೆ, ಶಾಲಾ ಸ್ವಚ್ಛತೆ ಸೇರಿದಂತೆ ಹಲವು ಹೆಚ್ಚುವರಿ ಕೆಲಸಗಳನ್ನು ನೌಕರರು ನಿರ್ವಹಿಸುತ್ತಿದ್ದಾರೆ. ಆದರೆ ಅವರ ಕೆಲಸಕ್ಕೆ ತಕ್ಕ ವೇತನ ಹಾಗೂ ಸೌಲಭ್ಯಗಳು ದೊರೆಯುತ್ತಿಲ್ಲ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

‘ಬಿಸಿಯೂಟ ನೌಕರರಿಗೆ ಸರ್ಕಾರ ಭರವಸೆ ನೀಡಿದ್ದ ₹7 ಸಾವಿರ ವೇತನ ಹೆಚ್ಚಳವನ್ನು ಕೂಡಲೇ ಜಾರಿಗೊಳಿಸಬೇಕು. ಕಳೆದ ಎರಡು ತಿಂಗಳಿಂದ ಬಾಕಿ ಇರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಪ್ರತಿತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ನೌಕರರಿಗೆ ಆರು ಗಂಟೆಗಳ ಕೆಲಸದ ಅವಧಿ ನಿಗದಿಪಡಿಸಿ ಅಧಿಕೃತ ಸುತ್ತೋಲೆ ಹೊರಡಿಸಬೇಕು. ಆರೋಗ್ಯ ವಿಮೆ, ಮಾಸಿಕ ₹10 ಸಾವಿರ ಪಿಂಚಣಿ ಹಾಗೂ ನಿವೃತ್ತಿ ನೌಕರರಿಗೆ ಇಡಿಗಂಟು ಸೌಲಭ್ಯ ಕಲ್ಪಿಸಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆ ನೌಕರರನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು.

Advertisements

‘ಕೆಪಿಎಸ್‌, ಮ್ಯಾಗ್ನೆಟ್ ಶಾಲೆಗಳ ಪರಿಕಲ್ಪನೆ ಹಾಗೂ ಖಾಸಗಿ ಸಂಸ್ಥೆಗಳು, ಇಸ್ಕಾನ್, ಮಠಗಳು ಸೇರಿದಂತೆ ಇತರ ಸಂಸ್ಥೆಗಳ ಮೂಲಕ ಬಿಸಿಯೂಟ ಒದಗಿಸುವ ಕ್ರಮದಿಂದ ನೌಕರರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಇಂತಹ ಕ್ರಮಗಳನ್ನು ಕೈಬಿಟ್ಟು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕೆಲಸದ ಭದ್ರತೆ ಒದಗಿಸಬೇಕು’ ಎಂದು ತಿಳಿಸಿದರು.

‘ಅಡುಗೆ ಕೇಂದ್ರಗಳನ್ನು ಸುಸಜ್ಜಿತಗೊಳಿಸಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು. ಕೆಲಸದ ಸ್ಥಳದಲ್ಲಿ ನೌಕರರು ಮೃತಪಟ್ಟರೆ ₹25 ಲಕ್ಷ ಪರಿಹಾರ ನೀಡಬೇಕು. ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬದವರಿಗೆ ಉದ್ಯೋಗ ನೀಡಬೇಕು. ಹಾಜರಾತಿ ಆಧಾರದ ಮೇಲೆ ನೌಕರರನ್ನು ಕೆಲಸದಿಂದ ತೆಗೆದುಹಾಕುವ ಕ್ರಮ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

‘ಅಕ್ಷರ ದಾಸೋಹ ಯೋಜನೆಯನ್ನು ಶಿಕ್ಷಣ ಇಲಾಖೆಯಡಿಯಲ್ಲಿಯೇ ಮುಂದುವರಿಸಬೇಕು. ಬಿಸಿಯೂಟ ಯೋಜನೆಯ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಬಾರದು. ಬೇಸಿಗೆ, ದಸರಾ ರಜೆ ಹಾಗೂ ಚುನಾವಣೆ ಸಂದರ್ಭದಲ್ಲೂ ವೇತನ ಪಾವತಿಸಬೇಕು. ಬಿಸಿಯೂಟ ನೌಕರರನ್ನು ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ನೌಕರರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಇಲಾಖೆಯ ಅಧಿಕಾರಿಗಳು ಹಾಗೂ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸಬೇಕು’ ಎಂದು ಶಾಸಕರಿಗೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ಈ ಸಂದರ್ಭದಲ್ಲಿ ಸುರೇಖಾ ಎಸ್‌ ಕುಲಕರ್ಣಿ, ಮಂಜುಳಾ ಕಲಕೇರಿ ದೇವಪುರ, ವರಲಕ್ಷ್ಮಿ, ಲಕ್ಷ್ಮಿದೇವಿ, ಮಹಾದೇವಮ್ಮ, ಮಾಲಿನಿ ಮೇಸ್ತಾ, ಮಂಜುಳಾ ಕಲಕೇರಿ ದೇವಪುರ ಸೇರಿದಂತೆ ಸಿಐಟಿಯು ಹಾಗೂ ಅಂಗನವಾಡಿ ನೌಕರರ ಸಂಘದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...